Cnewstv / 21.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ.
ಶಿವಮೊಗ್ಗ : ಫೋಕ್ಸ್ ಪ್ರಕರಣದ ಅರೋಪಿಯಾದ ಫಾದ್ರಿ ಫ್ರಾನ್ಸಿಸ್ ಫರ್ನಾಂಡಿಸ್ ರವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ನಗರದ ಸೇಕ್ರೆಡ್ ಹಾರ್ಟ್ ಚರ್ಚ್ ನ ಪಾದ್ರಿ ಹಾಗೂ ಚರ್ಚ್ ನ ಆಡಳಿತದ ಅಧೀನದಲ್ಲಿರುವ ಕಾಲೇಜಿನ ಪ್ರಾಂಶುಪಾಲರಾದ ಫ್ರಾನ್ಸಿಸ್ ಫರ್ನಾಂಡಿಸ್ ರವರು ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ಹಾಗೂ ಜಾತಿ ನಿಂದನೆ ಮಾಡಿರುವ ಬಗ್ಗೆ ಕಾನೂನಿನ ಗಮನಕ್ಕೆ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರಕ್ಷಕ ಇಲಾಖೆ ಈಗಾಗಲೇ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಹೇಯ ಕೃತ್ಯವನ್ನು ಎಸಗಿರುವ ಧಾರ್ಮಿಕ ಗುರುವಿನ ಮೃಗೀಯ ವರ್ತನೆಯಿಂದ ಸಮಾಜದ ಸ್ವಾಸ್ಥ, ಧಾರ್ಮಿಕ ನಂಬಿಕೆ, ಸನಾತನ ಧರ್ಮಕ್ಕೆ ಧಕ್ಕೆ ಉಂಟಾಗಿದೆ. ಆರೋಪಿಯನ್ನು, ಕಠಿಣವಾಗಿ ಶಿಕ್ಷೆಗೆ ಒಳಪಡಿಸಬೇಕು. ನೀಚ ಕೃತ್ಯ ಎಸಗಿರುವ ಹಾಗೂ ಯಾವುದೇ ರಾಜಕೀಯ, ಧಾರ್ಮಿಕ ಒತ್ತಡಗಳಿಗೆ ಮಣಿಯದೆ, ಸಮಾಜಕ್ಕೆ ಉತ್ತಮ ಹಾಗೂ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಉಳಿಯುವಂತೆ ಕಠಿಣ ಶಿಕ್ಷೆಯನ್ನು ವಿಧಿಸಬೇಕೆಂದು ವಿನಂತಿಸಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv