Cnewstv / 22.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಘಟಿಕೋತ್ಸವ ನಡೆಯುತ್ತಿದ್ದಾಗಲೇ ಎನ್.ಎಸ್.ಯು.ಐ. ಕಾರ್ಯಕರ್ತರಿಂದ ಪ್ರತಿಭಟನೆ.
ಶಿವಮೊಗ್ಗ : ಕುವೆಂಪು ವಿವಿ ಘಟಿಕೋತ್ಸವ ನಡೆಯುತ್ತಿದ್ದಾಗಲೇ ಎನ್.ಎಸ್.ಯು.ಐ. ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆದಿದೆ.
ಇಂದು ಬೆಳಗ್ಗೆ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಘಟಿಕೋತ್ಸವ ನಡೆಯುತ್ತಿತ್ತು. ಕಾರ್ಯಕ್ರಮದಲ್ಲಿ ರಾಜ್ಯಪಾಲರ ಭಾಷಣದ ನಡುವೆಯೇ NSUI ಕಾರ್ಯಕರ್ತರು ಧಿಕ್ಕಾರ ಕೂಗಿದರು.
ಕುವೆಂಪು ವಿವಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿ, ಕುವೆಂಪು ವಿಶ್ವವಿದ್ಯಾಲಯದ ವಿಸಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೋರಹಾಕಿದರು.
ಈ ವೇಳೆ ಭಾಷಣ ಮುಗಿಸುತ್ತಿದ್ದಂತೆ ಧಿಕ್ಕಾರ ಕೂಗಿದವರು ಬಂದು ನನ್ನ ಬಳಿ ಮಾತನಾಡಲಿ. ಅವರ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೆನೆ ಎಂದ ರಾಜ್ಯಪಾಲರು ಹೇಳಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv