Cnewstv / 22.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಎರಡು ಕಾರಿನ ನಡುವೆ ಅಪಘಾತ.
ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ ತೀರ್ಥಹಳ್ಳಿ ಕೊಪ್ಪ ಶೃಂಗೇರಿ ರಸ್ತೆಯ ತಿರಳೇಬೈಲು ಸಮೀಪ ಶನಿವಾರ ಸಂಜೆ ವೇಳೆ ಎರಡು ಸ್ವಿಫ್ಟ್ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಡಿಕ್ಕಿಯಾದ ರಭಸಕ್ಕೆ ಒಂದು ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಪೆಟ್ಟಾಗಿದ್ದು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ತೀರ್ಥಹಳ್ಳಿಯಿಂದ ಕೊಪ್ಪ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರಿಗೆ ತೀರ್ಥಹಳ್ಳಿ ಕಡೆ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಒಂದು ಕಾರಿನಲ್ಲಿ ಭದ್ರಾವತಿ ಮೂಲದವರು ಇದ್ದರು ಎಂದು ತಿಳಿದು ಬಂದಿದ್ದು ಮತ್ತೊಬ್ಬರ ಬಗ್ಗೆ ತಿಳಿದು ಬಂದಿಲ್ಲ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv