Cnewstv / 24.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮೈತುಂಬಿ ಹರಿಯುತ್ತಿರುವ ತುಂಗಾ ನದಿ. ಮುಳುಗಿದ ಮಂಟಪ.
ಶಿವಮೊಗ್ಗ : ತುಂಗಾ ನದಿ ಮೈತುಂಬಿ ಹರಿಯುತ್ತಿದೆ. ತುಂಗಾ ನದಿ ಹಿನ್ನೀರಿನ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾದ ಹಿನ್ನೆಲೆಯಲ್ಲಿ ತುಂಗಾ ನದಿಯ ಒಳ ಮತ್ತು ಹೊರಹರಿವಿನ ಪ್ರಮಾಣ ಹೆಚ್ಚಾಗಿದೆ.
ಇಂದು ಮಧ್ಯಾಹ್ನ ಗಾಜನೂರು ಡ್ಯಾಂ ನಿಂದ 67,275 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಕೋರ್ಪಳಯ್ಯನ ಛತ್ರದ ಹತ್ತಿರವಿರುವ ಮಂಟಪ ಮುಳುಗಿದ್ದು, ಮೈತುಂಬಿ ಹರಿಯುತ್ತಿರುವ ತುಂಗಾ ನದಿಯನ್ನು ನೋಡಲು ಸೇತುವೆ ಹತ್ತಿರ ಸಾಕಷ್ಟು ಮಂದಿ ಆಗಮಿಸುತ್ತಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv