Breaking News

ರೈಲಿಗೆ ತಲೆಕೊಟ್ಟು ಉಪನ್ಯಾಸಕ ಆತ್ಮಹತ್ಯೆ.

Cnewstv / 25.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ರೈಲಿಗೆ ತಲೆಕೊಟ್ಟು ಉಪನ್ಯಾಸಕ ಆತ್ಮಹತ್ಯೆ.

ಶಿವಮೊಗ್ಗ : ರೈಲಿಗೆ ತಲೆ ಕೊಟ್ಟು ಉಪನ್ಯಾಸ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ಶಿವಮೊಗ್ಗದಲ್ಲಿ ನಡೆದಿದೆ.

ವಿನೋಬ ನಗರ ಸಮೀಪದ ರೈಲ್ವೆ ಟ್ರ್ಯಾಕ್ ಬಳಿ ತಾಳಗುಪ್ಪ ಎಕ್ಸ್ಪ್ರೆಸ್ ರೈಲಿಗೆ ತಲೆಕೊಟ್ಟು ಡಿ ವಿ ಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ವಿಶ್ವನಾಥ್ (70) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಶ್ವನಾಥ್ ಅವರು ಬೆಂಗಳೂರಿನ ತಮ್ಮ ಮಗನ ಮನೆಯಲ್ಲಿದ್ದರೂ ಕಳೆದ ಎರಡು ಮೂರು ದಿನಗಳ ಹಿಂದೆ ಶಿವಮೊಗ್ಗಕ್ಕೆ ವಾಪಸ್ ಆಗಿದ್ದರು. ಇಂದು ಬೆಳಗ್ಗೆ ವಾಕಿಂಗ್ ಗೆ ಹೋಗಿದ್ದ ವಿಶ್ವನಾಥ್ ಅವರು ತಾಳಗುಪ್ಪ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಜಾಹಿರಾತು

https://youtu.be/z7mZ_qX2l2Y

Leave a Reply

Your email address will not be published. Required fields are marked *

*