Cnewstv / 26.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿಕ್ಷಣ ಸಚಿವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿ, ಜೈ ಶ್ರೀರಾಮ್ ಘೋಷಣೆ ಕೂಗಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು..
ಶಿವಮೊಗ್ಗ : ಶಿಕ್ಷಣ ಸಚಿವರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶನ ಮಾಡಿ, ಜೈ ಶ್ರೀರಾಮ್ ಘೋಷಣೆ ಕೂಗಿದ ಘಟನೆ ಇಂದು ಬೆಳಗ್ಗೆ ಶಿವಮೊಗ್ಗದಲ್ಲಿ ನಡೆದಿದೆ.
ಪಠ್ಯ ಪುಸ್ತಕದಿಂದ ಸಾವರ್ಕರ್ ಹಾಗೂ ಹೆಗಡೆವಾರ್ ಪಠ್ಯ ಹರಿದು ಹಾಕುವೆ ಎಂಬ ಶಿಕ್ಷಣ ಸಚಿವರ ಹೇಳಿಕೆ ವಿಚಾರ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಬಿಜೆಪಿ ಯುವ ಮೋರ್ಚಾ
ಜಿಲ್ಲಾಧ್ಯಕ್ಷ ಹರಿಕೃಷ್ಣ ನೇತೃತ್ವದಲ್ಲಿ ಕಾರ್ಯಕರ್ತರ ದಿಢೀರ್ ಪ್ರತಿಭಟನೆ ನಡೆಸಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಧು ಬಂಗಾರಪ್ಪನವರು ಇಂದು ಬೆಳಗ್ಗೆ ಸಭೆ ಕರೆದಿದ್ದರು. ಸಭೆ ಆರಂಭಕ್ಕೂ ಮುನ್ನವೇ ಕಪ್ಪು ಪಟ್ಟಿ ಪ್ರದರ್ಶಿಸಿ, ಸಚಿವರಿಗೆ ಧಿಕ್ಕಾರ ಕೂಗಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ತಕ್ಷಣ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv