Cnewstv / 29.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ವಸತಿ ಶಾಲೆ ಹಾಗೂ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ.
ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿಗೆ ಕಾರ್ಯನಿರ್ವಹಿಸುತ್ತಿರುವ ಶಿಕಾರಿಪುರದ ಉಡುಗಣಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿ ದ್ವಿಗುಣ ಮತ್ತು 11ನೇ ತರಗತಿ, ಪಿಸಿಎಂಬಿ, ಸಿಇಬಿಎ ಹಾಗೂ ಭದ್ರಾವತಿಯ ದೊಡ್ಡೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 11ನೇ ತರಗತಿ ಪಿಸಿಎಂಬಿ ಮತ್ತು ಸಿಇಬಿಎ ತರಗತಿಗೆ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ 75% ಹಾಗೂ ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ 25% ರಷ್ಟು ಸ್ಥಾನಗಳು ಮೀಸಲು ಇರುತ್ತದೆ. ಇದರಲ್ಲಿ ಬಾಲಕಿಯರಿಗೆ 50% ರಷ್ಟು ಸ್ಥಾನಗಳು ಮೀಸಲಿರಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ 11ನೇ ತರಗತಿಯಿಂದ 12ನೇ ತರಗತಿವರೆಗೆ ಉಚಿತ ಶಿಕ್ಷಣ ಮತ್ತು ನುರಿತ ಅನುಭವಿ ಶಿಕ್ಷಕ/ಉಪನ್ಯಾಸಕರಿಂದ ಉತ್ತಮ ಗುಣಮಟ್ಟದ ವೈಜ್ಞಾನಿಕ ಆಧಾರಿತ ಶಿಕ್ಷಣ ನೀಡಲಾಗುವುದು. ಪ್ರತಿದಿನ ಯೋಗ, ವ್ಯಾಯಾಮ. ಸುಸಜ್ಜಿತ ಗಣಕಯಂತ್ರ ಕೋಣೆ, ಗ್ರಂಥಾಲಯ ಹಾಗೂ ಡಿಜಿಟಲ್ ಲೈಬ್ರರಿ ವ್ಯವಸ್ಥೆ. ಉಚಿತ ಶಿಕ್ಷಣ, ಪಠ್ಯಪುಸ್ತಕ, ಆಹಾರ ಮತ್ತು ವಸತಿ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್, ಲೇಖನ ಸಾಮಗ್ರಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು. ತಾಂತ್ರಿಕ, ವೈದ್ಯಕೀಯ ಮತ್ತು ಇತ್ಯಾದಿ ವೃತ್ತಿಪರ ಶಿಕ್ಷಣಕ್ಕೆ ಅನುಕೂಲವಾಗಲು ವಿಜ್ಞಾನ ವಿಷಯಗಳಿಗೆ ಹಾಗೂ ವಾಣಿಜ್ಯ ವಿಷಯಗಳಿಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುವುದು. ವೃತ್ತಿಪರ ಕೋರ್ಸುಗಳ ನೀಟ್/ಜೆಇಇ/ಕೆಸೆಟ್ ಪ್ರವೇಶ ಪರೀಕ್ಷೆಗೆ ವಿಶೇಷ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.
ಪ್ರವೇಶ ಪಡೆಯಲು ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. 5ನೇ ತರಗತಿ ಹಾಗೂ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಪೋಷಕರ ಆದಾಯ ಮಿತಿ ಎಸ್.ಸಿ/ಎಸ್.ಟಿ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 1.00 ಲಕ್ಷ ರೂ.ಗಳು, ಅಲ್ಪಸಂಖ್ಯಾತರಿಗೆ ರೂ. 2.50 ಲಕ್ಷ ಮತ್ತು ಹಿಂದುಳಿದ ವರ್ಗದವರಿಗೆ ರೂ. 4.45 ಲಕ್ಷ ಮೀರಿರಬಾರದು. ಅಗತ್ಯ ದಾಖಲಾತಿಗಳಾದ 5ನೇ ತರಗತಿ ಮತ್ತು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿ, ವಿದ್ಯಾರ್ಥಿ ಹಾಗೂ ಪಾಲಕರ ಆಧಾರ್‍ಕಾರ್ಡ್, ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು 2 ಫೆÇೀಟೋ ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಅಧಿಕಾರಿಗಳ ಕಚೇರಿ, ದೂರವಾಣಿ ಸಂಖ್ಯೆ: 08182-220206, ಉಡುಗಣಿ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಕಾಲೇಜು ಪ್ರಾಂಶುಪಾಲರು, ದೂರವಾಣಿ ಸಂಖ್ಯೆ : 9036866642 ಹಾಗೂ ದೊಡ್ಡೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಕಾಲೇಜು ಪ್ರಾಂಶುಪಾಲರು, ದೂರವಾಣಿ ಸಂಖ್ಯೆ : 9591237905 ನ್ನು ಸಂಪರ್ಕಿಸಹುದೆಂದು ಶಿವಮೊಗ್ಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಅಧಿಕಾರಿಗಳು ತಿಳಿಸಿರುತ್ತಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments