Breaking News

VISL ಕಾರ್ಖಾನೆ ಪುನರಾರಂಭಕ್ಕೆ ಕೇಂದ್ರ ಒಪ್ಪಿಗೆ.

Cnewstv / 07.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

VISL ಕಾರ್ಖಾನೆ ಪುನರಾರಂಭಕ್ಕೆ ಕೇಂದ್ರ ಒಪ್ಪಿಗೆ.

ನವದೆಹಲಿ : VISL ಕಾರ್ಖಾನೆ ಆಗಸ್ಟ್ 10 ರಿಂದ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಬಾರಿ ಚರ್ಚೆಗೆ ಗ್ರಾಸವಾಗಿದಂತಹ VISL ಕಾರ್ಖಾನೆ ಮತ್ತೆ ಪುನರಾರಂಭಗೊಳ್ಳುತ್ತಿದೆ. ಭದ್ರಾವತಿಯ ಸುವರ್ಣಯುಗ ಮತ್ತೆ ಶುರುವಾಗಲಿದೆ. ಅದರನ್ವಯ ಬಾರ್‌ಮಿಲ್ ಕಾರ್ಯಾಚರಣೆಗಳು ಆಗಸ್ಟ್ 10 ರಿಂದ ಪ್ರಾರಂಭವಾಗಲಿದ್ದು, ಮುಂದಿನ ದಿನಗಳಲ್ಲಿ ಪ್ರಾಥಮಿಕ ಗಿರಣಿ ಪುನರಾರಂಭವಾಗಲಿದೆ.

ಕೇಂದ್ರ ಗೃಹ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಶಾ ಜಿ, ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಜಿ, ಮತ್ತು ಕೇಂದ್ರ ಉಕ್ಕು ಸಚಿವ ಸನ್ಮಾನ್ಯ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾಜಿ ರವರುಗಳ ಸ್ಪಷ್ಟ ನಿರ್ದೇಶನದೊಂದಿಗೆ, SAIL ಆಡಳಿತ ಮಂಡಳಿಯು ಭದ್ರಾವತಿ VISL ನಲ್ಲಿ ಉತ್ಪಾದನಾ ಚಟುವಟಿಕೆಗಳನ್ನು ಪುನರಾರಂಭಿಸಲು ಅಂತಿಮವಾಗಿ ಒಪ್ಪಿಕೊಂಡಿರುವುದನ್ನು ತಿಳಿಸಲು ನನಗೆ ಅತ್ಯಂತ ಸಂತೋಷವಾಗುತ್ತಿದೆ.

ವಿಐಎಸ್‌ಎಲ್‌ ಅನ್ನು ನಂಬಿಕೊಂಡಿರುವ ಉದ್ಯೋಗಿ ಸಮುದಾಯಕ್ಕೆ ಮತ್ತು ಭದ್ರಾವತಿಯ ಜನ ಸಾಮಾನ್ಯರಿಗೆ ಈ ಒಂದು ನಿರ್ಧಾರ ಮಹತ್ವದ ಕ್ಷಣವಾಗಿದೆ ಎಂಬುದಾಗಿ ಭಾವಿಸಿದ್ದೇನೆ. ಕೇಂದ್ರ ಸರ್ಕಾರದ ಸಂಬಂಧಿಸಿದ ಮಂತ್ರಿಗಳೊಂದಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಡೆಸಲಾದ ನಿರಂತರ ಪ್ರಯತ್ನದ ಫಲವಾಗಿ ಇಂತಹ ಒಂದು ಮಹತ್ತರವಾದ ನಿರ್ಣಯವನ್ನು SAIL ಕೈಗೊಳ್ಳಲು ಸಹಕಾರವಾಗಿದ್ದು, ಈ ಮಹತ್ವದ ಮೈಲಿಗಲ್ಲನ್ನು ಪಡೆಯಲು ದಣಿವರಿಯಿಲ್ಲದೆ ಕೆಲಸ ಮಾಡಿದ್ದೇವೆ.

VISL ನ ಪುನರುಜ್ಜೀವನಕ್ಕೆ ಕೇಂದ್ರ ಸರ್ಕಾರ ನೀಡಿದಂತಹ ಭರವಸೆಗಳನ್ನು ಈಡೇರಿಸಿದ ಅವರ ಅಚಲ ಬದ್ಧತೆಗಾಗಿ ಕೇಂದ್ರ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ VISL ಶೀಘ್ರದಲ್ಲಿಯೇ ಉನ್ನತ ಯಶಸ್ಸು ಮತ್ತು ಸಮೃದ್ದಿಯ ಹಾದಿಯಲ್ಲಿ ಸಾಗಿ ತನ್ನ ಗತ ವೈಭವವನ್ನು ಮರಳಿ ಪಡೆಯುತ್ತದೆ ಎಂಬ ವಿಶ್ವಾಸವಿದೆ.
ಇಂತಹ ಒಂದು ಮಹತ್ತರವಾದ ತೀರ್ಮಾನ ಬರುವಲ್ಲಿ ತಾಳ್ಮೆಯಿಂದ ಸಹಕರಿಸಿದ ವಿ.ಐ.ಎಸ್.ಎಲ್. ನ ಎಲ್ಲಾ ನೌಕರರ ಬಾಂಧವರಿಗೆ, ಕಾರ್ಮಿಕ ಸಂಘಟನೆ ಮುಖಂಡರಿಗೆ, ಜನಪ್ರತಿನಿಧಿಗಳಿಗೆ ನನ್ನ ಧನ್ಯವಾದಗಳು.

– ಸಂಸದ ಶ್ರೀ ಬಿ. ವೈ. ರಾಘವೇಂದ್ರ

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*