ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯನ್ನಾಗಿ ಮಧು ಬಂಗಾರಪ್ಪ ಅವರನ್ನ ಕಣಕ್ಕಿಳಿಸಲಾಗುತ್ತದೆ ಎಂದು ವಿಜಯಪುರ ಜಿಲ್ಲೆಯ ಪ್ರವಾಸದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.ಮಧು ಬಂಗಾರಪ್ಪ ಅವರು ಸದ್ಯ ವಿದೇಶದಲ್ಲಿದ್ದಾರೆ. ಭಾರತಕ್ಕೆ ಬಂದ ಬಳಿಕ, ಅವರನ್ನು ಸಂಪರ್ಕಿಸಲಾಗುವುದು.ಒಂದು ವೇಳೆ ಮಧು ಬಂಗಾರಪ್ಪ ಅಭ್ಯರ್ಥಿಯಾಗಲು ಒಪ್ಪದಿದ್ದರೆ ಕಾಂಗ್ರೆಸ್ ಜೊತೆ ಚರ್ಚೆ ಮಾಡಿ ಅಭ್ಯರ್ಥಿಯನ್ನ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದರು. ಕಳೆದ ಬಾರಿ ಸ್ಪರ್ಧಿಸಿದ್ದ ಎಐಸಿಸಿ ಸದಸ್ಯ ಮಂಜುನಾಥ್ ಭಂಡಾರಿ, ರಾಜ್ಯ ವಕ್ತಾರ ಕೆ ದಿವಾಕರ್, ಜಿಲ್ಲಾಧ್ಯಕ್ಷ ಟಿ.ಎನ್ ಶ್ರೀನಿವಾಸ್ ಅಲ್ಲದೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಕಾಗೋಡು ತಿಮ್ಮಪ್ಪ ಅವರ ಫ್ಯಾಮಿಲಿಗೂ ಟಿಕೆಟ್ ನೀಡುವ ಆಫರ್ ನೀಡಲಾಗಿದೆ. ರಾಜ್ಯದಲ್ಲಿ ನಡೆಯುವ ಐದು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಸೇರಿ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಈ ಕುರಿತು ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಮೇಶ್ವರ್, ದಿನೇಶ್ ಗುಂಡುರಾವ್ ಜೊತೆ ಚರ್ಚಿಸಲಾಗಿದೆ ಎಂದು ತಿಳಿಸಿದರು.
Recent Comments