Cnewstv / 21.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮದಾರಿಪಾಳ್ಯದಲ್ಲಿ ಸ್ಥಳೀಯ ನಿವಾಸಿಗಳಿಂದ ಪ್ರತಿಭಟನೆ..
ಶಿವಮೊಗ್ಗ : ವಾರ್ಡ್ ನಂ. ೩೪ ಮತ್ತು ೩೫ರ ಸೂಳೆಬೈಲು ಮದಾರಿಪಾಳ್ಯದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರವುಗೊಳಿಸಬೇಕೆಂದು ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಇಂದು ಪ್ರತಿಭಟನೆ ನಡೆಸಿದ್ದಾರೆ.
ಶಾಲೆ, ಅಂಗನವಾಡಿ, ದೇವಸ್ಥಾನ ಹಾಗೂ ದರ್ಗಾಗಳ ಸಮೀಪವೇ ಶ್ರೀನಿಧಿ ಬಾರ್ ಅಂಡ್ ರೆಸ್ಟೋರೆಂಟ್ ಇದ್ದು, ಇದನ್ನು ತೆರವುಗೊಳಿಸಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಬೈಪಾಸ್ ರಸ್ತೆ ಊರಗಡೂರು ಸಮೀಪದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ, ಅಂಗನವಾಡಿ, ಎರಡು ದೇವಸ್ಥಾನಗಳು ಹಾಗೂ ದರ್ಗಾ ಇದ್ದು, ಹೆಚ್ಚಿನ ಸಂಖ್ಯೆಯ ಭಕ್ತರು, ಶಾಲಾ ಮಕ್ಕಳು ಬಂದು ಹೋಗುತ್ತಾರೆ. ಇವುಗಳ ಸಮೀಪವೇ ೧೦೦ ಮೀ ಒಳಗೆ ಕಾನೂನು ಬಾಹಿರವಾಗಿ ಶ್ರೀನಿಧಿ ಬಾರ್ ಅಂಡ್ ರೆಸ್ಟೋರೆಂಟ್ ಇದ್ದು, ಅಬಕಾರಿ ಇಲಾಖೆಯಿಂದ ಪರವಾನಿಗೆ ಪಡೆದು ಇನ್ನೊಂದು ಹೊಸ ಬಾರ್ ಪ್ರಾರಂಭಿಸಲು ಸಜ್ಜಾಗಿದ್ದಾರೆ ಎಂದು ದೂರಿದರು.
ಬಾರ್ ಅಂಡ್ ರೆಸ್ಟೋರೆಂಟ್‌ನಿಂದ ಶಾಲೆ, ಅಂಗನವಾಡಿ ಮಕ್ಕಳಿಗೆ ಹಾಗೂ ದೇವಾಲಯ ದರ್ಗಾಗಳಿಗೆ ಬರು ವ ಭಕ್ತರಿಗೆ ತೊಂದರೆಯಾಗುತ್ತಿದೆ. ಸಾರ್ವಜನಿಕರ ವಿರೋಧದ ಹಿನ್ನೆಲೆಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರವುಗೊಳಿಸಬೇಕೆಂದು ಆಗ್ರಹಿಸಿದರು. ಸ್ಥಳಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡ ಪ್ರತಿಭಟನಾನಿರತರೊಂದಿಗೆ ಚರ್ಚಿಸಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv