Cnewstv / 22.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮತ್ತು ಬರುವ ಔಷಧಿ ನೀಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ..
ಶಿವಮೊಗ್ಗ : ಕೆಲವು ತಿಂಗಳ ಹಿಂದೆ ನಗರದಲ್ಲಿ ನಡೆದಂತಹ ಪೋಕ್ಸೋ ಪ್ರಕರಣವನ್ನೇ ಜನರು ಇನ್ನೂ ಮರೆತಿಲ್ಲ ಅದರ ಬೆನ್ನಲ್ಲೇ ಇದೀಗ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮತ್ತೊಂದು ಪೋಕ್ರೋ ಪ್ರಕರಣ ದಾಖಲಾಗಿದೆ.
ಅಪ್ರಾಪ್ತ ಬಾಲಕಿಗೆ ಮತ್ತು ಬರುವ ಔಷಧಿ ನೀಡಿ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸಾಗರದ ಅಜಯ್ (32) ಹಾಗೂ ಶಾಬಾದ್ (26) ಎನ್ನುವವರು ಪರಿಚಿತ ಬಾಲಕಿಯನ್ನು ಪುಸಲಾಯಿಸಿ ಪ್ರವಾಸಕ್ಕೆ ಕರೆದೊಯ್ದಿದ್ದಾರೆ ಈ ವೇಳೆ ಬಾಲಕಿಗೆ ಮತ್ತು ಬರುವ ಔಷಧಿಯನ್ನು ನೀಡಿ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ್ದಾರೆ.
ಅರೋಪಿ ಯುವಕರ ವಿರುದ್ಧ ಪೋಕ್ಸೋ ಹಾಗೂ ಅಟ್ರಾಸಿಟಿ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಈ ಘಟನೆ ಆಗಸ್ಟ್ 19 ರಂದು ನಡೆದಿದ್ದು, ನಿನ್ನೆ ಸಂಜೆ ಸಾಗರ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

C News TV Kannada News Online in cnewstv