Breaking News

ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಉಪ ತಹಶೀಲ್ದಾರ್ ಹಾಗೂ ಮಧ್ಯವರ್ತಿ..

Cnewstv / 22.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಉಪ ತಹಶೀಲ್ದಾರ್ ಹಾಗೂ ಮಧ್ಯವರ್ತಿ..

ಶಿವಮೊಗ್ಗ : ಲೋಕಾಯುಕ್ತ ಅಧಿಕಾರಿಗಳು ಇಂದು ಮುಂಚಿನ ಕಾರ್ಯಾಚರಣೆ ನಡೆಸಿದ್ದು ಡೆಪ್ಯೂಟಿ ತಗಶೀಲ್ದಾರ್ ಹಾಗೂ ಮಾಧ್ಯವರ್ತಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಹೊಳೆಹೊನ್ನೂರು ನಾಡಕಚೇರಿಯ ಉಪತಗಶೀಲ್ದಾರ್ ಪರಮೇಶ್ವರ್ (59) ಹಾಗೂ ಮಧ್ಯವರ್ತಿ ಪ್ರಕಾಶ್ ನಾಯ್ಕ್ (32) ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಖಾತೆ ಬದಲಾವಣೆಗಾಗಿ 40,000 ರೂಪಾಯಿ ಲಂಚದ ಬೇಡಿಕೆಯನ್ನು ಇಟ್ಟಿದ್ದು 30,000 ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.

ಶಿವರಾಜ್ ಎಂಬುವವರು ದೂರು ನೀಡಿದ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿ ವೈ ಎಸ್ ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*