Cnewstv / 22.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ..
ಶಿವಮೊಗ್ಗ : ಅನ್ಯಕೋಮಿನ ಯುವಕನಿಂದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರವಾಗಿರುವ ಘಟನೆ ಬೆಳಕಿಗೆ ಬಂದಿದೆ.
ಅಜಮುತ್ತುಲ್ಲಾ ಎಂ ಅಲಿಯಾಸ್ ಇಬ್ಬು (23) ಎಂಬ ಯುವಕನು ಕಳೆದ ಒಂದು ವರ್ಷದಿಂದ ಅನ್ಯಕೋಮಿನ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾನೆ. ಬಾಲಕಿಯ ಆರೋಗ್ಯದಲ್ಲಿ ಏರುಪಾಯರಾದ ಹಿನ್ನೆಲೆಯಲ್ಲಿ ವೈದ್ಯರ ಬಳಿ ತಪಾಸಣೆಗೆ ಹೋದಾಗ ಯುವತಿ ಗರ್ಭಿಣಿಯಾಗಿದ್ದ ವಿಚಾರ ದೃಢಪಟ್ಟಿದೆ.
ವಿಷಯ ತಿಳಿಯುತ್ತಿದ್ದಂತೆ ಪೋಷಕರು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯ ವಿರುದ್ಧ ಐಪಿಸಿ 376, ಪೋಕ್ಸೋ ಹಾಗೂ ಎಸ್ಸಿ ಎಸ್ಟಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv