Cnewstv / 23.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ.
ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿವಿ ಕೇಂದ್ರದ ಎಫ್ -7 ಪಿಳ್ಳಂಗಿರಿ ಎನ್.ಜೆ.ವೈ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಮಾರ್ಗದಲ್ಲಿ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಆ.24 ರ ಬೆಳಗ್ಗೆ 09:00 ರಿಂದ ಸಂಜೆ 05:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಹೊಳೆಬೇನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಶಿವಮೊಗ್ಗ ನಗರ ಉಪ ವಿಭಾಗ-1ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಇರುವುದರಿಂದ ಬೊಮ್ಮನಕಟ್ಟೆ, ಎ.ಬಿ.ಸಿ. ಬ್ಲಾಕ್, ನಿಗಡೆ ಲೇಔಟ್, ಸಾನ್ವಿ ಲೇಔಟ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಆ.24 ರಂದು ಬೆಳಗ್ಗೆ 10.00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments