Cnewstv / 23.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಹೆಚ್.ಸಿ.ಯೋಗೀಶ್ ನನ್ನ ಚಿಕ್ಕ ಗೆಳೆಯ.. ಕೆ ಬಿ ಪ್ರಸನ್ನ ಕುಮಾರ್ ಪಕ್ಷದ ಕೆಲವರ ವರ್ತನೆಯಿಂದ ಬೇಸರವಾಗಿದ್ದಾರೆ
ಶಿವಮೊಗ್ಗ : ಮಾಜಿ ಸಂಸದ ಆಯನೂರು ಮಂಜುನಾಥ್ ರವರು ಜೆಡಿಎಸ್ ಪಕ್ಷವನ್ನು ತೊರೆದು ನಾಳೆ ಬೆಳಗ್ಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಅವಕಾಶವಿತ್ತು. ಕಾರಣಾಂತರಗಳಿಂದ ಆಗಿರಲಿಲ್ಲ. ಈಗ ಅವಕಾಶ ಸಿಕ್ಕಿದೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಎಲ್ಲರೂ ಸೇರಿ ಶಕ್ತಿ ಹಾಗೂ ಸಮಯ ನೀಡುತ್ತೇವೆ.
ಬದಲಾದ ರಾಜಕೀಯ ಪರಿಸ್ಥಿತಿಯಿಂದಾಗಿ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಸೇರ್ಪಡೆಗೆ ಒಳ್ಳೆಯ ಅವಕಾಶವಿದೆ ಹಾಗೂ ಸಹಕಾರ ದೊರೆಯುತ್ತದೆ ಎಂಬ ವಿಶ್ವಾಸದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದು, ಯಾವುದೇ ಷರತ್ತು ಇಲ್ಲದೆ ಸೇರ್ಪಡೆಗೊಳ್ಳುತ್ತಿದ್ದು, ವಿಧಾನ ಪರಿಷತ್‌ನ ಪದವೀಧರರ ಕ್ಷೇತ್ರ ಹಾಗೂ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷ ಅವಕಾಶ ನೀಡಿದರೆ ಸ್ಪರ್ಧೆ ಮಾಡುತ್ತೇನೆ ಎಂದರು.
ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲು ಕೆಲವರು ವಿರೋಧ ಮಾಡುವುದು ಸಹಜ. ಆದರೆ ಶೇ.99 ರಷ್ಟು ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತಿಸಿದ್ದಾರೆ. ಆದರೆ ಪಾಲಿಕೆ ಸದಸ್ಯ ಹೆಚ್.ಸಿ.ಯೋಗೀಶ್, ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವುದಕ್ಕೆ ವಿರೋಧಿಸಿದ್ದಾರೆ. ಅವರು ನನ್ನ ಚಿಕ್ಕ ಗೆಳೆಯ. ಅದನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದ ಅವರು, ನನ್ನ ನೂರಾರು ಬೆಂಬಲಿಗರು ಸಹ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದರು.
ನನ್ನೊಂದಿಗೆ ಜೆಡಿಎಸ್‌ಗೆ ಬಂದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರು, ಕಾಂಗ್ರೆಸ್‌ನಿಂದ 2018 ರ ಚುನಾವಣೆಯಲ್ಲಿ ಸ್ಪರ್ಧಿಸಿ 59 ಸಾವಿರಕ್ಕೂ ಹೆಚ್ಚು ಮತ ಪಡೆದು ಸೋಲು ಅನುಭವಿಸಿದ್ದರು. ಆದರೆ ಪಕ್ಷದ ಕೆಲವರ ವರ್ತನೆಯಿಂದಾಗಿ ಬೇಸತ್ತು ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಬಂದರು. ಈಗ ಅವರು ಕಾಂಗ್ರೆಸ್ ಸೇರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಮುಂಬರುವ ದಿನಗಳಲ್ಲಿ ಸೇರಲೂಬಹುದು ಎಂದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv