Cnewstv / 23.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಚಂದ್ರನ ಅಂಗಳದಲ್ಲಿ ಸೂಸೂತ್ರವಾಗಿ ಇಳಿದ ವಿಕ್ರಮ್ ಲ್ಯಾಂಡರ್..
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿಗಳು ಚಂದ್ರಯಾನ 3ರ ನೌಕೆಯನ್ನು ಚಂದ್ರನ ಅಂಗಳದಲ್ಲಿ ಇಳಿಸುವ ಮೂಲಕ ಯಶಸ್ವಿಯಾಗಿದ್ದಾರೆ.
ಇಂದುಬಸಂಜೆ ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಆಗಸ್ಟ್ 18 ರಂದು, ISRO ತನ್ನ ಕಕ್ಷೆಯನ್ನು 113 ಕಿಮೀ x 157 ಕಿಮೀಗೆ ಹತ್ತಿರವಾಗುವ ಮೂಲಕ ಮೊದಲ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಿರ್ವಹಿಸಿತು. ಚಂದ್ರನ ಕಡೆಗೆ 34 ದಿನಗಳ ಸುದೀರ್ಘ ಪ್ರಯಾಣದ ನಂತರ ಲ್ಯಾಂಡರ್ ಮಾಡ್ಯೂಲ್ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಬೇರ್ಪಟ್ಟ ಮರುದಿನ ಇದನ್ನು ನಡೆಸಲಾಯಿತು. ಆಗಸ್ಟ್ 20 ರಂದು, ವಿಕ್ರಂ ಲ್ಯಾಂಡರ್ ಮಾಡ್ಯೂಲ್‌ನ ಎರಡನೇ ಮತ್ತು ಅಂತಿಮ ಡೀಬೂಸ್ಟ್ ಪ್ರಕ್ರಿಯೆ ನಡೆದಿದ್ದು ಇದು ಮಾಡ್ಯೂಲ್ ಆರ್ಬಿಟರ್ ನ್ನು 25 ಕಿಮೀ x 134 ಕಿಮೀಗೆ ಇಳಿಸಿತು.

ಇಡೀ ಜಗತ್ತೇ ಕಾತುರದಿಂದ ಕಾಯುತ್ತಿದ್ದ ಕ್ಷಣ ನನಸಾಗಿದೆ. ಚಂದ್ರಯಾನ 3 ಯಶಸ್ವಿಯಾಗುವ ಮೂಲಕ ಚಂದ್ರನ ದಕ್ಷಿಣ ಧ್ರುವ ಪ್ರದೇಶವನ್ನು ಅನ್ವೇಷಿಸುವ ಮೊದಲ ದೇಶ ಭಾರತವಾಗಿದೆ. ಚಂದ್ರಯಾನ 3 ರಾಕೆಟ್ ಅನ್ನು ಅಭಿವೃದ್ಧಿಪಡಿಸಲು ಹಾಗೂ ಉಡಾವಣೆ ಮಾಡಲು 615 ಕೋಟಿ ರೂಪಾಯಿ ಖರ್ಚಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv