Cnewstv / 23.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಚಂದ್ರಯಾನ-3 ಲ್ಯಾಂಡಿಂಗ್, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಂಭ್ರಮಾಚರಣೆ.
ಶಿವಮೊಗ್ಗ : ಇಡೀ ಜಗತ್ತೇ ಕಾತುರದಿಂದ ಕಾಯುತ್ತಿದ್ದ ಕ್ಷಣ ನನಸಾಗಿದೆ. ಚಂದ್ರಯಾನ 3 ಯಶಸ್ವಿಯಾಗುವ ಮೂಲಕ ಚಂದ್ರನ ದಕ್ಷಿಣ ಧ್ರುವ ಪ್ರದೇಶವನ್ನು ಅನ್ವೇಷಿಸುವ ಮೊದಲ ದೇಶ ಭಾರತವಾಗಿದೆ.
ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಂಭ್ರಮಾಚರಣೆ ಮಾಡಲಾಯಿತು.
ಎಸ್ ಪಿ ಕಛೇರಿ ಮುಂಭಾಗ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಡಿಸಿಆರ್ಬಿ ಡಿವೈಎಸ್ಪಿ ಪ್ರಭು, ವೈರ್ಲೆಸ್ ಇನ್ಸ್ಪೆಕ್ಟರ್ ಸತೀಶ್ ಕುಮಾರ್ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399