Cnewstv / 26.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಯಾವ ಪಕ್ಷ ಬೀದಿಗೆ ಬರುತ್ತದೆ ಎಂಬುದು ಗೊತ್ತಾಗಲಿದೆ – ಕೆ ಎಸ್ ಈಶ್ವರಪ್ಪ.
ಶಿವಮೊಗ್ಗ : ಬಿಜೆಪಿಯನ್ನು ಖಾಲಿ ಮಾಡುತ್ತಾರೆ ಎಂಬ ಕಾಂಗ್ರೆಸ್ ಹೇಳಿಕೆಗೆ ಜನ ಲೋಕಸಭಾ ಚುನಾವಣೆಯಲ್ಲಿ ಜನರು ಉತ್ತರ ನೀಡಲಿದ್ದಾರೆ. ಯಾವ ಪಕ್ಷ ಬೀದಿಗೆ ಬರುತ್ತದೆ ಎಂಬುದು ಗೊತ್ತಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಬಿಜೆಪಿಯ ಯಾವುದೇ ಶಾಸಕರು ಅಥವಾ ವಿಧಾನ ಪರಿಷತ್ ಸದಸ್ಯರು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗುವುದಿಲ್ಲ. ಇದೇ ಸಿದ್ದರಾಮಯ್ಯ ಸೂರ್ಯ ಚಂದ್ರರಿರುವ ವರೆಗೆ ಕಾಂಗ್ರೆಸ್ ಬಿಟ್ಟ 17 ಶಾಸಕರನ್ನು ಮತ್ತೆ ಸೇರಿಸಿಕೊಳ್ಳುವುದಿಲ್ಲ ಎಂದಿದ್ದರು. ಈಗ ಅವರನ್ನು ಸೆಳೆಯಲು ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅವರ ಪ್ರಯತ್ನ ಫಲಿಸುವುದಿಲ್ಲ ಎಂದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments