ಶಿವಮೊಗ್ಗ ಜಿಲ್ಲಾಧಿಕಾರಿಗಳು ಇಂದು ಬೆಳಗ್ಗೆ ನಿಧಿಗೆ ನಾಡ ಕಛೇರಿಗೆ ದಿಢೀರ್ ಭೇಟಿ ನೀಡಿ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ಪರಿಶೀಲಿಸಿದರು. ಆರ್ ಟಿ ಸಿ, ಪಹಣಿ, ಜಾತಿ ಹಾಗೂ ಆದಾಯ ಪ್ರಮಾಣ ಪತ್ರದ ಬಾಕಿ ಉಳಿದಿರುವ ಅರ್ಜಿಗಳ ವಿವರವನ್ನು ಪಡೆದು, ಅಟಲ್ ಜೀ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗ್ರಾಮ ಲೆಕ್ಕಾಧಿಕಾರಿಗಳವರಿಂದ ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ಕಾರ್ಯದ ಪ್ರಗತಿಯ ಕುರಿತು ವಿವರವನ್ನು ಪಡೆದು ಪ್ರಸ್ತುತ ದಾಖಲಾಗಿರುವ ಬೆಳೆ ಸಮೀಕ್ಷೆ ಕಾರ್ಯದ ಅಂದಾಜು ಪಟ್ಟಿಯನ್ನು ಪರಿಶೀಲಿಸಿದರು. ಮತ್ತು ನಾಡ ಕಛೇರಿಯ ಅಭಿಲೇಖಾಲಯಕ್ಕೆ ಭೇಟಿ ಮಾಡಿ ಕಡತಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿ ಹಾಗೂ ಕಛೇರಿಯ ಆವರಣದ ಸುತ್ತಮುತ್ತಲೂ ಸ್ವಚ್ಚವಾಗಿ ಇಟ್ಟುಕೊಳ್ಳಿ ಎಂದು ಸಿಬ್ಬಂದಿಗಳಿಗೆ ಈ ಬಗ್ಗೆ ಸೂಕ್ತ ಮನವರಿಕೆ ಮಾಡಿದರು, ಭೇಟಿ ವೇಳೆಯಲ್ಲಿ ನೀಡಿದ ಸಲಹೆ ಸೂಚನೆಗಳ ಕುರಿತು ಅನುಪಾಲನಾ ವರದಿಯನ್ನು ಸಲ್ಲಿಸುವಂತೆ, ಮೂಲ ಭೂತ ಸೌಕರ್ಯಗಳ ಅಗತ್ಯತೆ ಕುರಿತು, ಕಛೇರಿಗೆ ಸಂಬಂದಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಮೇಲಾಧಿಕಾರಿಗಳವರ ಗಮನಕ್ಕೆ ತರುವಂತೆ ಉಪ ತಹಶೀಲ್ದಾರ್ ರವರಿಗೆ ಸೂಚಿಸಿದರು.ಸಾರ್ವಜನಿಕರು ಅಟಲ್ ಜೀ ಕೇಂದ್ರದಲ್ಲಿ ಸಿಬ್ಬಂದಿಗಳ ಕೊರತೆ ಇದ್ದು, ಸಾರ್ವಜನಿಕರಿಗೆ ಸೌಲಭ್ಯಗಳ ವಿಳಂಬವಾಗುತ್ತಿವೆ ಎಂದು ಅಹವಾಲುಗಳನ್ನು ಸಲ್ಲಿಸಿದರು. ಸಿಬ್ಬಂದಿಗಳ ಸಮಸ್ಯೆಯ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.

Recent Comments