Cnewstv / 28.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಆಯನೂರು, ಪಾಲಿಕೆ ಸದಸ್ಯರಿಗೆ ಇಲ್ಲ ಆಹ್ವಾನ. ಅಂದು ವಿರೋಧ- ಇಂದು ದೂರ:
ಶಿವಮೊಗ್ಗ: ಕಳೆದ ಎರಡು ದಿನದ ಹಿಂದೆಯಷ್ಟೇ ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ಸೇರಿದ್ದ ಮಾಜಿ ಸಂಸದ ಆಯನೂರು ಮಂಜುನಾಥ್ ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ್ದಾರೆ. ತಮ್ಮೊಂದಿಗೆ ಪಕ್ಷಕ್ಕೆ ಸೇರಿದ ಮುಖಂಡರೊಂದಿಗೆ ಆಗಮಿಸಿ, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಸದಸ್ಯತ್ವ ಪಡೆದು ಪ್ರತಿಕಾಗೋಷ್ಠಿಯನ್ನು ನಡೆಸಿದ್ದಾರೆ.
ಆಯನೂರು ಮಂಜುನಾಥ್ ಕಚೇರಿಗೆ ಭೇಟಿ ನೀಡಿದ ವೇಳೆ ಜಿಲ್ಲಾಧ್ಯಕ್ಷರಾದ ಹೆಚ್ಎಸ್ ಸುಂದರೇಶ್, ವಿಧಾನ ಪರಿಷತ್ ಮಾಜಿ ಸದಸ್ಯರು, ಬ್ಲಾಕ್ ಅಧ್ಯಕ್ಷರು, ಮಾಜಿ ಮಹಾಪೌರರು ಉಪಸ್ಥಿತರಿದ್ದು, ಸ್ವಾಗತಿಸಿದ್ದಾರೆ.
ಅಂದು ವಿರೋಧ- ಇಂದು ದೂರ:
ಈ ಹಿಂದೆಯೇ ಆಯನೂರು ಮಂಜುನಾಥ್ ರವರ ಕಾಂಗ್ರೆಸ್ ಸೇರ್ಪಡೆಗೆ ಪಾಲಿಕೆ ಸದಸ್ಯ ಹಾಗೂ ಕಾಂಗ್ರೆಸ್ ವಿಧಾನಸಭಾ ಅಭ್ಯರ್ಥಿ ಹೆಚ್ ಸಿ. ಯೋಗೇಶ್ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಇಂದಿನ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಯಾವುದೇ ಸದಸ್ಯರು, ವಿರೋಧ ಪಕ್ಷದ ನಾಯಕಿ ಉಪಸ್ಥಿತರಿರದೇ ಅಂತರ ಕಾಯ್ದುಕೊಂಡು ಇರುವುದು ಇಲ್ಲಿ ಎಲ್ಲವೂ ಸರಿ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ.
ಸಭೆಯಲ್ಲಿ ಪಾಲಿಕೆ ಸದಸ್ಯರು ಯಾರು ಇಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ, ಈ ಸಭೆಗೆ ನಾವು ಅವರನ್ನು ಆಹ್ವಾನವಿಲ್ಲ ಎಂಬ ಜಿಲ್ಲಾಧ್ಯಕ್ಷರಾದ ಎಚ್ ಎಸ್ ಸುಂದರೇಶ್ ರವರ ಸ್ಪಷ್ಟನೆ,
ಪಾಲಿಕೆ ಸದಸ್ಯರ ಅವಶ್ಯಕತೆ ಇಲ್ಲ ಎನ್ನುವಂತಿತ್ತು.. ಒಟ್ಟಿನಲ್ಲಿ ಕಾಂಗ್ರೆಸ್ಸಿನ ಸದ್ಯದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments