Breaking News

ಶಾಲಾ ವಿದ್ಯಾರ್ಥಿಯ ಬ್ಯಾಗ್ ನಲ್ಲಿ ಪ್ರತ್ಯಕ್ಷವಾದ ನಾಗರಹಾವು.. ಸಹಪಾಠಿಯ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ.

Cnewstv / 02.09.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಾಲಾ ವಿದ್ಯಾರ್ಥಿಯ ಬ್ಯಾಗ್ ನಲ್ಲಿ ಪ್ರತ್ಯಕ್ಷವಾದ ನಾಗರಹಾವು.. ಸಹಪಾಠಿಯ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ.

ಶಿವಮೊಗ್ಗ : ಶಾಲಾ ವಿದ್ಯಾರ್ಥಿಯ ಬ್ಯಾಗಿನಲ್ಲಿ ನಾಗರಹಾವು ಪ್ರತ್ಯಕ್ಷವಾದ ಘಟನೆ ಶಿವಮೊಗ್ಗ ತಾಲೂಕಿನ ರಿಪ್ಪನಪೇಟೆಯಲ್ಲಿ ನಡೆದಿದೆ.

ಹೊಸನಗರ ತಾಲೂಕಿನ ರಿಪ್ಪನಪೇಟೆ ಸಮೀಪದ ಬಾಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿರುವ ಭುವನ್ ಎಂಬ ವಿದ್ಯಾರ್ಥಿಯ ಬ್ಯಾಗಿನಲ್ಲಿ ಈ ನಾಗರಹಾವು ಪ್ರತ್ಯಕ್ಷವಾಗಿದೆ.

ಎಂದಿನಂತೆ ಇಂದು ಶಾಲೆಯಲ್ಲಿ ಪುಸ್ತಕ ತೆಗೆಯಲು ಬ್ಯಾಗನ್ನು ಓಪನ್ ಮಾಡಿದಾಗ ಭುವನ್ ಬ್ಯಾಗ್ ನಲ್ಲಿ ನಾಗರಹಾವು ಪ್ರತ್ಯಕ್ಷವಾಗಿದೆ. ತಕ್ಷಣವೇ ತನ್ನ ಪಕ್ಕದಲ್ಲಿ ಇದ್ದಂತಹ ಸಹಪಾಠಿ ಮಣಿಕಂಠನಿಗೆ ಹೇಳಿದ್ದಾನೆ. ಮಣಿಕಂಠ ಕೂಡಲೇ ಬ್ಯಾಗ್ ಜಿಪ್ ಹಾಕಿ ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ.

ತಕ್ಷಣವೇ ಶಿಕ್ಷಕರು ಬ್ಯಾಗನ್ನು ಹೊರತಂದು ಪರಿಶೀಲನೆ ನಡೆಸಿ, ಭುವನ್ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೋಷಕರು ಹಾಗೂ ಶಿಕ್ಷಕರು ಸಮೀಪದ ಕಾಡಿಗೆ ನಾಗರಹಾವನ್ನು ಬಿಟ್ಟು ಬಂದಿದ್ದಾರೆ.

ವಿದ್ಯಾರ್ಥಿ ಮಣಿಕಂಠನ ಸಮಯಪ್ರಜ್ಞೆಯಿಂದ ಅನಾಹುತ ಒಂದು ತಪ್ಪಿದಂತಾಗಿದೆ. ಈ ಕಾರ್ಯಕ್ಕೆ ಶಿಕ್ಷಕರು ಹಾಗೂ ಪೋಷಕರು ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*