ಶಿಕಾರಿಪುರದ ಮಂಗಳ ಭವನದಲ್ಲಿ ಹಮ್ಮಿಕೊಳ್ಳಲಾಗಿದ ಪ್ರಚಾರ ಸಭೆಯಲ್ಲಿ ಶಾಸಕ ಕೆ.ಎಸ್.ಈಶ್ಚರಪ್ಪನವರು
ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದ್ದಾರೆ.ಮೈಸೂರಿನಲ್ಲಿ ನಡೆದ ದಸರಾ ಆಚರಣೆಯಲ್ಲಿ ಕೇವಲ ಜೆಡಿಎಸ್ನವರು ಮಾತ್ರ ಭಾಗವಹಿಸಿದ್ದಾರೆ. ಕಾಂಗ್ರೆಸ್ ನವರು ಶಕ್ತಿ ಹೀನರಾಗಿದ್ದಾರೆ. ಕೇವಲ ಸಚಿವ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತೆ ಗೆದ್ದು ಪ್ರಧಾನಿ ಆಗುತ್ತಾರೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಮತ್ತೆ ಚುನಾವಣೆ ನಡೆದು ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ
ಶಿವಮೊಗ್ಗ ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ಗೆ ಅಭ್ಯರ್ಥಿಯೇ ಇಲ್ಲವಾಗಿದೆ. ಈ ಚುನಾವಣೆ ಒಂದು ರೀತಿಯಲ್ಲಿ ಟೆಸ್ಟ್ ಡೋಸ್ ಇದ್ದ ಹಾಗೆ ಎಂದು ಅಭಿಪ್ರಾಯಪಟ್ಟರು.

Recent Comments