Breaking News

ಉಪ ನಿರ್ದೇಶಕರ ಹುದ್ದೆಗಾಗಿ ಅರ್ಜಿ ಆಹ್ವಾನ.

Cnewstv / 04.09.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಉಪ ನಿರ್ದೇಶಕರ ಹುದ್ದೆಗಾಗಿ ಅರ್ಜಿ ಆಹ್ವಾನ.

ಶಿವಮೊಗ್ಗ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ 06 (ಆರು) ಉಪ ನಿರ್ದೇಶಕರ ಹುದ್ದೆಗಾಗಿ ಮೇಜರ್ / ಲೆಪ್ಟಿನೆಂಟ್ ಕರ್ನಲ್ ಅಥವಾ ನೌಕಾಸೇನೆ ಮತ್ತು ವಾಯು ಸೇನೆಯಲ್ಲಿ ತತ್ಸಮಾನ ರ್ಯಾಂಕ್‍ನಿಂದ ಬಿಡುಗಡೆ / ನಿವೃತ್ತಿ ಹೊಂದಿರುವ, ದಿನಾಂಕ 01/01/2024 ಕ್ಕೆ 52 ವರ್ಷದೊಳಗಿನ ವಯೋಮಾನದ, ಎಸ್.ಎಸ್.ಎಲ್.ಸಿ / ತತ್ಸಮಾನ ತರಗತಿಯಲ್ಲಿ ಒಂದು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿ ತೇರ್ಗಡೆಯಾದ ಸೈನ್ಯಾಧಿಕಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ನಮೂನೆಯನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಲ್ಲಿ ಖುದ್ದಾಗಿ ಅಥವಾ ದೂರವಾಣಿ ಮುಖಾಂತರ ಕರೆ ಮಾಡಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸಂಬಂಧಿತ ಎಲ್ಲಾ ಶೈಕ್ಷಣಿಕ ಮತ್ತು ಸೇನಾ ದಾಖಲೆಗಳೊಂದಿಗೆ ಕಛೇರಿಗೆ ಸೆ. 18 ರೊಳಗೆ ಸಲ್ಲಿಸುವಂತೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇವರ ದೂರವಾಣಿ ಸಂಖ್ಯೆ 080-25589459 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*