Cnewstv / 07.09.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಜನರು ಹೆಚ್ಚಾಗಿ ಬರುವುದು ಮಾತೃ ಇಲಾಖೆಯಾಗಿರುವ ಕಂದಾಯ ಇಲಾಖೆಗೆ…
ಶಿವಮೊಗ್ಗ : ಸರ್ಕಾರ ಇರುವುದು ಜನ ಜೀವನ ಸುಲಲಿತಗೊಳಿಸುವುದಕ್ಕೆ. ಜನರು ಹೆಚ್ಚಾಗಿ ಬರುವುದು ಮಾತೃ ಇಲಾಖೆಯಾಗಿರುವ ಕಂದಾಯ ಇಲಾಖೆಗೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಜನರ ನಿರೀಕ್ಷೆಯನ್ನು ಅರ್ಥ ಮಾಡಿಕೊಂಡು ತ್ವರಿತವಾಗಿ, ಜನಪರ ಸೇವೆಯನ್ನು ನೀಡಬೇಕೆಂದು ಕಂದಾಯ ಇಲಾಖೆ ಅಧಿಕಾರಿಗಳು/ಸಿಬ್ಬಂದಿಗಳಿಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಸೂಚಿಸಿದರು.
ಜನರು ಹೆಚ್ಚಾಗಿ ಬರುವುದು ಮಾತೃ ಇಲಾಖೆಯಾಗಿರುವ ಕಂದಾಯ ಇಲಾಖೆಗೆ. ಆದ್ದರಿಂದ ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಂಡು ಅವರನ್ನು ಹೆಚ್ಚು ಅಲೆದಾಡಿಸದೇ ಗುಣಮಟ್ಟದ ಮತ್ತು ತ್ವರಿತ ಸೇವೆಯನ್ನು ನೀಡಬೇಕು. ಈ ನಿಟ್ಟಿನಲ್ಲಿ ಆಡಳಿತ ಯಂತ್ರದಲ್ಲಿ ಬದಲಾವಣೆಗಳನ್ನು ತರಲಾಗುತ್ತಿದೆ, ಅದನ್ನು ಪರಿಣಾಮಕಾರಿಯಾಗಿ ಅಧಿಕಾರಿ/ಸಿಬ್ಬಂದಿ ವರ್ಗದವರು ಅನುಷ್ಟಾನಕ್ಕೆ ತರಬೇಕೆಂದರು.
ಸಮಸ್ಯಾತ್ಮಕ ಪೈಕಿ ಆರ್‍ಟಿಸಿ ಗಳನ್ನು ಒಂದುಗೂಡಿಸಿ ಸರ್ವೇ ಮಾಡಿಸಲು ಕ್ರಮ ವಹಿಸಲಾಗುತ್ತಿದ್ದು ಜನರ ಬಹಳ ವರ್ಷಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಸುಧಾರಣೆ ಕ್ರಮಗಳು ಆಗುತ್ತಿವೆ. ಆದರೆ ಇನ್ನೂ ಹಲವಾರು ಸವಾಲುಗಳಿವೆ ಎಂದರು.
ಶಿವಮೊಗ್ಗದಲ್ಲಿ ಭೂಮಿ ಮಂಜೂರಾತಿ ವಿಷಯದಲ್ಲಿ ಹೆಚ್ಚಿನ ಸಮಸ್ಯೆಗಳಿವೆ. ಜಿಲ್ಲಾಧಿಕಾರಿಗಳು ಶರಾವತಿ ಸಂತ್ರಸ್ತರು, ಹಾಗೂ ಇತರೆ ಭೂಮಿ ಮಂಜೂರಾತಿ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ. ಅರಣ್ಯ ಮತ್ತು ಕಂದಾಯ ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ ಇದನ್ನು ಬಗೆಹರಿಸಲು ಕ್ರಮ ವಹಿಸಲಾಗುವುದು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments