Cnewstv / 07.09.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್, ಓರ್ವ ಬಾಲಕಿ ಸಾವು..
ಶಿವಮೊಗ್ಗ : ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದು ಓರ್ವ ಬಾಲಕಿ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಖಾಸಗಿ ಬಸ್ ವೊಂದುವಏಕಾಏಕಿ ಮಕ್ಕಳ ಮೇಲೆ ಹರಿದ ಘಟನೆ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ನಡೆದಿದೆ.
ಘಟನೆಯಲ್ಲಿ ತುಳಸಿ (15) ನಿವೇದಿತ (14) ಎಂಬ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿತ್ತು. ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಉಳಿದ ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಅದರೆ ಶಿವಮೊಗ್ಗದ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ತುಳಸಿ ಮೃತಪಟ್ಟಿದ್ದಾರೆ. ಆಸ್ಪತ್ರೆ ಬಳಿ ತುಳಸಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಏಕಾಏಕಿ ರಸ್ತೆ ಬದಿಯ ಬಸ್ ನಿಲ್ದಾಣ ಹಾಗೂ ಮನೆಗಳತ್ತ ಬಸ್ ನುಗ್ಗಿದ ಪರಿಣಾಮ, ಡಿಕ್ಕಿ ರಬಸಕ್ಕೆ ಮನೆಯ ಮುಂಭಾಗದ ಛಾವಣಿ ಸಂಪೂರ್ಣ ಜಖಂ ಅಗಿದೆ. ಅಧಿಕ ವೇಗದ ಖಾಸಗಿ ಬಸ್ ಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ತರೀಕೆರೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv