Cnewstv / 7.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಕಾರುಗಳ ಮುಖಾಮುಖಿ ಡಿಕ್ಕಿ -ಇಬ್ಬರು ಸ್ಥಳದಲ್ಲೇ ಸಾವು.
ಶಿವಮೊಗ್ಗ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ತಾಲ್ಲೂಕಿನ ಜಾವಳ್ಳಿ ಸಮೀಪ ನಡೆದಿದೆ.
ಶಿವಮೊಗ್ಗ ನಗರದ ಇಲಿಯಾಸ್ ನಗರದ ನಿವಾಸಿ ಅಫ್ತಾಬ್ ಬಾಷಾ (40) ಹಾಗೂ ಅವರ ತಂಗಿ ಮಗಳು ಮದಿಯಾ ಮಿನಲ್ (12) ಮೃತ ದುರ್ದೈವಿಗಳು.

ತಂಗಿ ಮಗಳನ್ನು ಕರೆದುಕೊಂಡು ಚೆನ್ನಾಗಿರಿ ಕಡೆಗೆ ಹೋಗುತ್ತಿದ್ದಾಗ ಶಿವಮೊಗ್ಗ ಕಡೆಯಿಂದ ಬಂದ ಇನ್ನೊಂದು ಕಾರಿಗೆ ಜಾವಳ್ಳಿ ಹತ್ತಿರ ಮುಖಾಮುಖಿಯಾಗಿ ಡಿಕ್ಕಿಯಾಗಿದೆ.
ಇನ್ನೊಂದು ಕಾರಿನಲ್ಲಿದ್ದ ಬೆಂಗಳೂರು ಮೂಲದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಮೊಗ್ಗದ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv