Breaking News

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆ…

Cnewstv / 11.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆ…

ಶಿವಮೊಗ್ಗ : ಈಜಲು ನದಿಗೆ ಇಳಿದ ಇಬ್ಬರು ಯುವಕರು ನಾಪತ್ತೆಯಾದ ಘಟನೆ‌ ತೀರ್ಥಹಳ್ಳಿ ತಾಲೂಕಿನ ಭೀಮನಕಟ್ಟೆಯಲ್ಲಿ ನಡೆದಿದೆ.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರವಾಸ ಬಂದಿದ್ದ ಮೂವರು ಯುವಕರಲ್ಲಿ, ಇಬ್ಬರು ಯುವಕರು ಭೀಮನಕಟ್ಟೆ ಬಳಿಯ ತುಂಗಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದಾರೆ.
ನಾಪತ್ತೆಯಾದವರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೌತಮ್ (27) ಹಾಗೂ ಸಂಜಯ್ (25) ಎಂದು ಗುರುತಿಸಲಾಗಿದೆ.

ನಾಪತ್ತೆಯಾದ ಯುವಕರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ. ಅದರೆ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿರುವ ಕಾರಣ ಕಾರ್ಯಾಚರಣೆಗೆ ಹಿನ್ನಡೆಯಾಗುತ್ತಿದೆ. ತೀರ್ಥಹಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*