Breaking News

ಒಕ್ಕಲಿಗರ ಯುವ ಸಮಾವೇಶ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನಾ ಸಮಾರಂಭ..

Cnewstv / 11.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಒಕ್ಕಲಿಗರ ಯುವ ಸಮಾವೇಶ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನಾ ಸಮಾರಂಭ..

ಶಿವಮೊಗ್ಗ : ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸೆ.೧೩ರ ಬೆಳಿಗ್ಗೆ ೧೦ ಗಂಟೆಗೆ ಶ್ರೀ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಒಕ್ಕಲಿಗರ ಯುವ ಸಮಾವೇಶ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಕೆ. ಚೇತನ್ ತಿಳಿಸಿದರು.

ಅವರು ಇಂದು ಮಥುರಾ ಪ್ಯಾರಾಡೈಸ್ ಸಭಾಗಂಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾವೇಶದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ಸಾಧಕರಿಗೆ ಸನ್ಮಾನ ಹಾಗೂ ಒಕ್ಕಲಿಗ ಸಮುದಾಯದ ವಿಶೇಷ ಚೇತನರಿಗೆ ವ್ಹೀಲ್ ಚೇರ್, ವಾಕರ್, ವಾಕ್‌ಸ್ಟಿಕ್ ವಿತರಿಸಲಾಗುವುದು ಎಂದರು.

ಸಮುದಾಯದ ಸುಮಾರು ೧೨೫ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಇವರಲ್ಲಿ ಆರ್ಥಿಕವಾಗಿ ಅತ್ಯಂತ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ೫ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಸಮುದಾಯದ ಸುಮಾರು ೩೦ ವಿಶೇಷ ಚೇತನರಿಗೆ ವ್ಹೀಲ್ ಚೇರ್, ವಾಕರ್, ವಾಕ್‌ಸ್ಟಿಕ್ ವಿತರಿಸಲಾಗುವುದು ಎಂದರು.

ಸಮಾವೇಶದ ಸಾನಿಧ್ಯವನ್ನು ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ, ಶ್ರೀ ಪ್ರಸನ್ನನಾಥ ಸ್ವಾಮೀಜಿ ವಹಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎಲ್. ಭೋಜೇಗೌಡ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ, ನಿರ್ದೇಶಕರಾದ ಉಮಾಪತಿ, ಶ್ರೀನಿವಾಸ ಗೌಡ, ಸಿರಿಬೈಲು ಧರ್ಮೇಶ್, ಜಿಲ್ಲಾಧ್ಯಕ್ಷ ಆದಿಮೂರ್ತಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದರೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಆರ್.ಎಂ. ಮಂಜುನಾಥ ಗೌಡ, ದುಗ್ಗಪ್ಪ ಗೌಡ, ಯೋಗೇಶ್ ಗೌಡ, ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ ಆರ್. ವಿಜಯಕುಮಾರ್, ಜಿಲ್ಲಾ ಕಸಾಪ ಅಧ್ಯಕ್ಷ ಡಿ. ಮಂಜುನಾಥ್, ಉದ್ಯಮಿ ಕಿಮ್ಮನೆ ಜಯರಾಮ್, ಪಾಲಿಕೆ ಸದಸ್ಯರಾದ ಸುವರ್ಣಾ ಶಂಕರ್, ಯಮುನಾ ರಂಗೇಗೌಡ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ ಎಂದರು.

ಸಮಾವೇಶದಲ್ಲಿ ಸಮುದಾಯದ ಬಾಂಧವರು, ಯುವಕ, ಯುವತಿಯರು, ವಿದ್ಯಾರ್ಥಿಗಳು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಬಿ.ಎ. ರಮೇಶ್ ಹೆಗಡೆ, ಉಪಾಧ್ಯಕ್ಷ ಗುರುರಾಜ ಗೌಡ, ಪ್ರಧಾನ ಕಾರ್ಯದರ್ಶಿ ರಘುಗೌಡ, ಸಹ ಕಾರ್ಯದರ್ಶಿ ಪ್ರಜ್ವಲ್ ಗೌಡ, ಖಜಾಂಚಿ ಸುನಿಲ್ ಗೌಡ, ನಿರ್ದೇಶಕ ಅರುಣ್ ಗೌಡ, ಹರ್ಷಿತ್ ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*