Cnewstv / 11.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದರೂ ಜನರಿಗೆ ಸಮಾಧಾನ ತಂದಿಲ್ಲ : ಕೆ.ಎಸ್. ಈಶ್ವರಪ್ಪ.
ಶಿವಮೊಗ್ಗ : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದರೂ ಜನರಿಗೆ ಸಮಾಧಾನ ತಂದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ರಾಜ್ಯ ಸರ್ಕಾರ ಜನಪರವಾಗಿ ಇಲ್ಲ. ಆಂತರೀಕ ಮತ್ತು ಬಹಿರಂಗ ಬಡಿದಾಟದಲ್ಲಿ ಮುಳುಗಿದೆ. ಅವರ ಐದು ಗ್ಯಾರಂಟಿಗಳಲ್ಲಿ ಒಂದಾದರೂ ಜನರಿಗೆ ಸಮಾಧಾನ ತಂದಿಲ್ಲ. ಹಣ ಕೊಟ್ಟರೂ ವಿದ್ಯುತ್ ಸಿಗುತ್ತಿಲ್ಲ. ಉಚಿತ ಬಸ್ ಯೋಜನೆಯಿಂದಾಗಿ ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ಮತ್ತಿತರ ವಾಹನಗಳ ಮಾಲೀಕರು ಪರದಾಡುವಂತಾಗಿದೆ. ನಿರುದ್ಯೋಗಿ ಪದವೀಧರರಿಗೆ ಇನ್ನೂ ಗ್ಯಾರಂಟಿ ಲಭ್ಯವಾಗಿಲ್ಲ. ಉಚಿತ ಅಕ್ಕಿ ಯೋಜನೆಯಲ್ಲೂ ಖಚಿತತೆ ಇಲ್ಲ ಎಂದರು.
ಗ್ಯಾರಂಟಿಗಳಲ್ಲೇ ಮುಳುಗಿರುವ ರಾಜ್ಯ ಸರ್ಕಾರ ರೈತರನ್ನು ಮರೆತಿದೆ. ರಾಜ್ಯದ ರೈತರು ಬರಗಾಲಕ್ಕೆ ತುತ್ತಾಗಿ ಸಂಕಷ್ಟದಲ್ಲಿದ್ದಾರೆ. ಅಧಿಕಾರದಲ್ಲಿರುವ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ. ಬರಗಾಲ ಘೋಷಣೆ ಮಾಡಲು ಯೋಚಿಸುತ್ತಿದ್ದಾರೆ. ರೈತರ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ರೈತರ ಆತ್ಮಹತ್ಯೆ ಪ್ರಕರಣಗಳೆಷ್ಟು, ಬೆಳೆ ಪರಿಹಾರಕ್ಕಾಗಿ ಏನು ಮಾಡಿದ್ದಾರೆ ಎಂಬಿತ್ಯಾದಿ ರೈತರ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv