Cnewstv / 15.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನಿಮಗೆ ಎಷ್ಟೇ ಕಷ್ಟ ಬರಲಿ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ..
ಶಿವಮೊಗ್ಗ : ಪ್ರತಿದಿನ ಬೆಳಗ್ಗೆ ಪ್ರತಿ ಮನೆಯ ಸೇವೆ ಮಾಡುವ ಪೌರ ಕಾರ್ಮಿಕರ ಶ್ರಮಕ್ಕೆ ಬೆಲೆ ಕಟ್ಟಲಾಗುವುದಿಲ್ಲ. ನೀವು ಎಷ್ಟೇ ಕಷ್ಟ ಬರಲಿ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ
ಎಂದು ಸಮಾಜಸೇವಕ ಎಂ. ಶ್ರೀಕಾಂತ್ ಹೇಳಿದ್ದಾರೆ.
ಅವರು ಇಂದು ನಗರದ ವೀರಶೈವ ಕಲ್ಯಾಣ ಮಂದಿರಲ್ಲಿ ಸದ್ಭಾವನಾ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಶಿವಮೊಗ್ಗ ವತಿಯಿಂದ ಎಂ. ಶ್ರೀಕಾಂತ್ ನೇತೃತ್ವದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಿಳಾ ಪೌರ ಕಾರ್ಮಿಕರಿಗೆ ಗೌರಿ ಗಣೇಶ ಹಬ್ಬದ ಪ್ರಯುಕ್ತ ಬಾಗಿನ ವಿತರಿಸಿ ಮಾತನಾಡಿದ ಅವರು, ಇದು ಕಳೆದ ಎರಡು ವರ್ಷಗಳಿಂದ ನಿಮ್ಮೆಲ್ಲರ ಸಹೋದರನಾಗಿ ಈ ಕಾರ್ಯಕ್ರಮ ನಡೆಸುತ್ತಾ ಬಂದಿದ್ದೇನೆ. ಸ್ವಚ್ಛತೆಯ ನಿಮ್ಮ ಶ್ರಮಕ್ಕೆ ಬೆಲೆ ಕಟ್ಟಲಾಗುವುದಿಲ್ಲ ಎಂದರು.
ನನಗೆ ಪೌರ ಕಾರ್ಮಿಕರ ಒಡನಾಟ ಇದೆ. ಮತ್ತು ಅವಕ ಕಷ್ಟದ ಅರಿವಿದೆ. ನನಗೆ ಯಾವುದೇ ಅಧಿಕಾರ ಇಲ್ಲದಿದ್ದರೂ ಬಡವರ ಸೇವೆ ಮಾಡುತ್ತಾ ಬಂದಿದ್ದೇನೆ. ರಾಜಕಾರಣ ತನ್ನ ಸ್ವಾರ್ಥಕ್ಕಾಗಿ ಮಾಡಬಾರದು. ಬಡವರ ಹಿತಕ್ಕಾಗಿ ರಾಜಕಾರಣ ಮಾಡಬೇಕು. ನಾನು ಸೋತಾಗ ಇನ್ನು ಮುಂದೆ ರಾಜಕಾರಣ ಮಾಡಬಾರದು ಎಂದು ತೀರ್ಮಾನಿಸಿದ್ದೆ. ಆದರೆ, ಬಣ್ಣ ಹಚ್ಚಿದ ಮೇಲೆ ಪಾತ್ರ ಮಾಡಲೇಬೇಕು. ಬಿಡಲು ಮನಸಾಗುವುದಿಲ್ಲ. ಬದಲಾವಣೆ ಬಯಸಿದ್ದೇನೆ. ಇನ್ನು ೧೫ ದಿನದಲ್ಲಿ ಕಾಂಗ್ರೆಸ್ ಸೇರಲು ನಿಶ್ಚಯಿಸಿದ್ದೇನೆ ಎಂದು ಘೋಷಿಸಿದರು. ಪ್ರತಿನಿತ್ಯ ಜನ ಅವರ ಕೆಲಸ ಮಾಡಿಸಿಕೊಳ್ಳಲು ಬರುತ್ತಾರೆ. ಅದಕ್ಕಾಗಿಯಾದರೂ ಅಧಿಕಾರ ಬೇಕೇ ಬೇಕಾಗುತ್ತದೆ. ನನ್ನ ಜೊತೆಗಾರರಿಗೂ ಒಳ್ಳೆಯದಾಗಬೇಕು ಎಂಬ ದೃಷ್ಟಿಯಿಂದ ಈ ತೀರ್ಮಾನ ಆಗಬೇಕು ಎಂದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv