Breaking News

ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ SP ನೇತೃತ್ವದಲ್ಲಿ ರೂಟ್ ಮಾರ್ಚ್..

Www.cnewstv.in / 19.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ನೇತೃತ್ವದಲ್ಲಿ ರೂಟ್ ಮಾರ್ಚ್..

ಶಿವಮೊಗ್ಗ : ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್
ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.

ಇಂದು ಸಂಜೆ ಶಿವಮೊಗ್ಗ ನಗರದ ಮುರಾದ್ ನಗರ ದಿಂದ ಪ್ರಾರಂಭಿಸಿ, ಬಿ ಬಿ ರಸ್ತೆಯಿಂದ ಎಂಕೆಕೆ ರಸ್ತೆ, ಅಮೀರ್ ಅಹಮ್ಮದ್ ವೃತ್ತ, ಶಿವಪ್ಪ ನಾಯಕ ವೃತ್ತ, ಗಾಂಧಿ ಬಜಾರ್ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಎಸ್.ಪಿ. ಎಂ ರಸ್ತೆ ಮುಖಾಂತರವಾಗಿ ಬಂದು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ ಮುಕ್ತಾಯ ಮಾಡಲಾಯಿತು.

ಸದರಿ ಪಥ ಸಂಚಲನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರಡ್ಡಿ, ಡಿವೈಎಸ್.ಪಿ ಬಾಲರಾಜ್ ಬಿ, ಸುರೇಶ್, ಕೃಷ್ಣಮೂರ್ತಿ ಪಿ, ಶಿವಮೊಗ್ಗ ನಗರದ ಪೊಲೀಸ್ ವೃತ್ತ ನಿರೀಕ್ಷಕರು / ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು, ಡಿಎಆರ್ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು, ಕೆಎಸ್ಆರ್.ಪಿ ಮತ್ತು ಸಿವಿಲ್ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಹಾಗೂ ಗೃಹ ರಕ್ಷಕ‌ಸಿಬ್ಬಂಧಿಗಳು ಭಾಗವಸಿದ್ದರು.

 

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*