Breaking News

ಓಂ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ ಅಧಿಸೂಚನೆ.

Www.cnewstv.in / 29.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಓಂ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ ಅಧಿಸೂಚನೆ.

ಶಿವಮೊಗ : ನಗರದಲ್ಲಿ ಪ್ರತಿಷ್ಟಾಪಿಸಿರುವ ಓಂ ಗಣಪತಿ ವಿಸರ್ಜನಾ ಮೆರವಣಿಗೆಯು ದಿ: 30-09-2023 ರಂದು ನಡೆಯಲಿದ್ದು, ಈ ವೇಳೆ ಸಾರ್ವಜನಿಕ ಹಿತದೃಷ್ಟಿಯಿಂದ ಸಂಚಾರ ಸುಗಮಗೊಳಿಸುವ ಸಲುವಾಗಿ ಕೆಳಕಂಡ ಸ್ಥಳಗಳಲ್ಲಿ ವಾಹನ ಸಂಚಾರ ನಿಷೇಧ, ನಿಲುಗಡೆ ಮತ್ತು ವಾಹನ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.

ಮೆರವಣಿಗೆಯು ಅಶೋಕ ರಸ್ತೆಯಿಂದ ಪ್ರಾರಂಭವಾಗಿ ಎಸ್.ಪಿಎಂ ಮುಖ್ಯ ರಸ್ತೆ, ರಾಮಣ್ಣಶ್ರೇಷ್ಟಿ ಪಾರ್ಕ್, ಗಾಂಧಿಬಜಾರ್ ಮುಖ್ಯರಸ್ತೆ, ಎಸ್.ಎನ್ ಸರ್ಕಲ್, ಬಿ.ಹೆಚ್.ರಸ್ತೆ ಮುಖಾಂತರ, ಕರ್ನಾಟಕ ಸಂಘ ಪೊಲೀಸ್ ಕಾರ್ನರ್ ಮುಖಾಂತವಾಗಿ ಅಶೋಕ ರಸ್ತೆಯಿಂದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ರಸ್ತೆಯಲ್ಲಿ ಹೋಗಿ ತುಂಗಾನದಿಯಲ್ಲಿ ವಿಸರ್ಜನೆ ಮಾಡಲಾಗುವುದು.

• ಮೇಲ್ಕಂಡ ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆ ನಿಷೇಧಿಸಿದೆ.

• ಭದ್ರಾವತಿ, ಬೆಂಗಳೂರು ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ ಮತ್ತು ಎಲ್ಲಾ ಬಸ್‍ಗಳು ಎಂಆರ್‍ಎಸ್ ಮೂಲಕ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

• ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್‍ಗಳು ಎಂ.ಆರ್.ಎಸ್.ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

• ಹೊನ್ನಾಳಿ, ಹರಿಹರ, ದಾವಣಗೆರೆಯಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್‍ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್, ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರ, ಎಂಆರ್ ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರವಾಗಿ ಹೋಗುವುದು.

• ಕೋಟೆ ರಸ್ತೆ ಮತ್ತು ಓಲ್ಡ್‍ಬಾರ್ ಲೇನ್ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು.

• ಕೆಎಸ್‍ಆರ್‍ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆ ಕಡೆ ಹೋಗುವ ಎಲ್ಲಾ ಬಸ್‍ಗಳು ಮತ್ತು ಭಾರೀ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್-ಆಲ್ಕೋಳ ಸರ್ಕಲ್-ಪೊಲೀಸ್ ಚೌಕಿ-ರಾಜ್‍ಕುಮಾರ್ ಸರ್ಕಲ್, ಬೊಮ್ಮನಕಟ್ಟೆ ಮುಖಾಂತರ ಸವಳಂಗ ರಸ್ತೆಗೆ ಹೋಗುವುದು.

• ಕೆಎಸ್‍ಆರ್‍ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆಯ ಮುಖಾಂತರ ಎಂಆರ್‍ಎಸ್ ಸರ್ಕಲ್ ಕಡೆಗೆ ಹೋಗುವುದು.

• ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರಪಡಿಸಿರುತ್ತದೆ ಎಂದು ತಿಳಿಸಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*