Www.cnewstv.in / 05.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸಾಲು ಮರದ ತಿಮ್ಮಕ್ಕನವರ ಆರೋಗ್ಯ ಸ್ಥಿರವಾಗಿದೆ.
ಬೆಂಗಳೂರು : ಸಾಲು ಮರದ ತಿಮ್ಮಕ್ಕನವರ ಆರೋಗ್ಯ ಸ್ಥಿರವಾಗಿದೆ. ಈ ವಿಚಾರವಾಗಿ ಸುಳ್ಳು ಸುದ್ದಿ ಹರಡದಂತೆ ತಿಮ್ಮಕ್ಕ ನವರ ದತ್ತುಪುತ್ರ ಉಮೇಶ್ ಮನವಿ ಮಾಡಿದ್ದಾರೆ.
ಕನ್ನಡ ನಾಡಿನ ಹೆಮ್ಮೆಯ ಸಾಧಕಿ ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಏರುಪೇರಾಗಿದ್ದು, ನಿರಂತರವಾಗಿ ಕಳೆದೊಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದು, ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಆದರೆ, ಕೆಲವರು ಸಾಲು ಮರದ ತಿಮ್ಮಕ್ಕ ಅವರು ಬದುಕಿರುವಾಗಲೇ ಭಾವಪೂರ್ಣ ಶ್ರದ್ಧಾಂಜಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇಂದು ಬೆಳಗ್ಗೆ ಅವರ ದತ್ತುಪುತ್ರ ಉಮೇಶ್ ಆಸ್ಪತ್ರೆಯಲ್ಲಿ ತಿಮ್ಮಕ್ಕ ಚೇತರಿಕೆ ಕಾಣಿಸಿಕೊಂಡಿರುವ ಬಗ್ಗೆ ವಿಡಿಯೋ ಹಂಚಿಕೊಂಡಿದ್ದಾರೆ.
ಕಳೆದೊಂದು ವಾರದಿಂದ ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲಮರದ ತಿಮ್ಮಕ್ಕ ಅವರು ಬೇಲೂರಿನ ಸಂಬಂಧಿಕರ ಮನೆಗೆ ಹೋದಾಗ ಮನೆಯಲ್ಲಿ ಬಿದ್ದು ಅನಾರೋಗ್ಯ ಉಂಟಾಗಿದ್ದು, ಹಾಸನದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅಲ್ಲಿ ಚಿಕಿತ್ಸೆಗೆ ಹೆಚ್ಚಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಇನ್ನು ಬೆಂಗಳೂರಿನ ಸದ್ಯ ವೈದ್ಯರು ತಿಮ್ಮಕ್ಕ ಅವರಿಗೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments