Www.cnewstv.in / 08.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಒಂದೇ ಕುಟುಂಬದ ಮೂವರು ಬೆಂಕಿ ಅವಘಡದಲ್ಲಿ ಸಜೀವ ದಹನ..
ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪ ಕೆಕೋಡ್ನಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿ ಒಂದೇ ಕುಟುಂಬದ ಮೂವರು ಸಜೀವದಹನರಾಗಿದ್ದಾರೆ. ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಮೃತ ದುರ್ದೈವಿಗಳು. ಮನೆಯ ಕೋಣೆಯೊಳಗೆ ಸಂಗ್ರಹಿಸಿಟ್ಟಿದ್ದ ಕಟ್ಟಿಗೆ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇನ್ನೋರ್ವ ಪುತ್ರ ಭರತ್ (28) ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದರು. ಕೌಟುಂಬಿಕ ಸಮಸ್ಯೆ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆವ್ಯಕ್ತವಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399