Www.cnewstv.in / 16.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬರಗಾಲದ ಹಿನ್ನೆಲೆಯಲ್ಲಿ ಅತ್ಯಂತ ಸರಳ ರೈತ ದಸರಾ – ವಿಪಕ್ಷ ನಾಯಕಿ ಮೆಹಖ್ ಷರೀಫ್.
ಶಿವಮೊಗ್ಗ: ಮಹಾನಗರ ಪಾಲಿಕೆಯಿಂದ ಹಮ್ಮಿಕೊಂಡಿರುವ ದಸರಾ ಮಹೋತ್ಸವದಲ್ಲಿ ರೈತ ದಸರಾ ಸಮಿತಿ ವತಿಯಿಂದ ಬರಗಾಲದ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ರೈತ ದಸರಾವನ್ನು ಆಚರಿಸಲಾಗುವುದು ಎಂದು ಸಮಿತಿ ಅಧ್ಯಕ್ಷೆ ಮೆಹಖ್ ಷರೀಫ್‌ತಿಳಿಸಿದರು.
ಬೆಳಿಗ್ಗೆ 9 ಗಂಟೆಗೆ ಸೈನ್ಸ್ ಮೈದಾನದಿಂದ ಕುವೆಂಪು ರಂಗಮಂದಿರದವರೆಗೆ ರೈತ ಜಾಥಾ ನಡೆಯಲಿದ್ದು, ಈ ಜಾಥಾದಲ್ಲಿ ಎತ್ತಿನಗಾಡಿ, ಟ್ರಾö್ಯಕ್ಟರ್, ಟಿಲ್ಲರ್ ಹಾಗೂ ರೈತರು ಭಾಗವಹಿಸಲಿದ್ದಾರೆ ಎಂದರು.
ಬೆಳಿಗ್ಗೆ ೧೧ ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲೆಯ ಪ್ರಗತಿಪರ ರೈತ ಹಾಗೂ ಉದಯೋನ್ಮುಖ ಕೃಷಿ ಪಂಡಿತರಾದ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕೆ.ಆರ್. ಜ್ಞಾನೇಶ್ ಉದ್ಘಾಟಿಸಲಿದ್ದು. ಈ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಹಾಗೂ ಶಾಸಕಿ ಶಾರದಾ ಪರ‍್ಯಾ ನಾಯ್ಕ ಸನ್ಮಾನಿಸಲಿದ್ದಾರೆ ಎಂದರು. ಪತ್ರಿಕಾ ಗೋಷ್ಠಿಯಲ್ಲಿ ಸಮಿತಿಯ ಸದಸ್ಯ ಹೆಚ್.ಸಿ. ಯೋಗೇಶ್, ಅಧಿಕಾರಿ ನಾಗೇಂದ್ರ ಉಪಸ್ಥಿತರಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments