Breaking News

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.

Www.cnewstv.in / 03.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.

ಶಿವಮೊಗ್ಗ : ಜಿಲ್ಲಾ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳ ವತಿಯಿಂದ 2023-24 ನೇ ಸಾಲಿನಲ್ಲಿ ನೇರಸಾಲ ಯೋಜನೆ, ಉದ್ಯಮಾ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಿಗೆ ಅರ್ಜಿ ಆಹ್ವಾನಿಲಾಗಿದೆ.

ಆಸಕ್ತ ಫಲಾಪೇಕ್ಷಿಗಳು ಶಿವಮೊಗ್ಗ-1, ಗ್ರಾಮ-1, ಕರ್ನಾಟಕ-1, ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಅಗತ್ಯ ದಾಖಲೆಗಳೊಂದಿಗೆ ವೆಬ್‍ಸೈಟ್ https://sevasindhu.karnataka.gov.in ರ ಮೂಲಕ ನ.29 ರೊಳಗೆ ಅರ್ಜಿಗಳನ್ನು ಸಲ್ಲಿಸುವಂತೆ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-224349 ನ್ನು ಸಂಪರ್ಕಿಸುವುದು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*