Www.cnewstv.in / 05.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
23 ವರ್ಷದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ. 17 ಲಕ್ಷ ಪರಿಹಾರ ಹಣ ನೀಡುವಂತೆ ಆದೇಶ.
ಶಿವಮೊಗ್ಗ : 23 ವರ್ಷದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ. 17 ಲಕ್ಷ ಪರಿಹಾರ ಹಣ ನೀಡುವಂತೆ ನ್ಯಾಯಲಯ ಅದೇಶವನ್ನು ನೀಡಿದೆ.
ತೀರ್ಥಹಳ್ಳಿ ತಾಲ್ಲೂಕಿನ 23 ವರ್ಷದ ಯುವಕನೊಬ್ಬನು 16 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಇದರಿಂದ ಮನನೊಂದ ಬಾಲಕಿಯು ನೇಣು ಹಾಕಿ ಕೊಂಡು ಮೃತಪಟ್ಟಿರುತ್ತಾಳೆಂದು ಮೃತ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿತ್ತು.
FTSC-1 ನ್ಯಾಯಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆದು, ಆರೋಪಿಯ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ನ 4 ರಂದು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1,25,000/- ರೂ ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಲಾಗಿದೆ ಹಾಗೂ ಮೃತ ಬಾಲಕಿಯ ಕುಟುಂಬಸ್ಥರಿಗೆ ಪರಿಹಾರವಾಗಿ ಸರ್ಕಾರದಿಂದ 17,00,000/- ನೀಡಲು ಆದೇಶಿಸಿಸಲಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv