Www.cnewstv.in / 07.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ದೇಶಾದ್ಯಂತ ಏಕಕಾಲದಲ್ಲೆ ನಡೆಯಲಿರುವ 70 ನೇ ಅಖಿಲ ಭಾರತ ಸಹಕಾರ ಸಪ್ತಾಹ..
ಶಿವಮೊಗ್ಗ : ದೇಶಾದ್ಯಂತ ಏಕಕಾಲದಲ್ಲೆ ನಡೆಯಲಿರುವ 70 ನೇ ಅಖಿಲ ಭಾರತ ಸಹಕಾರ ಸಪ್ತಾಹ ನಡೆಯಲಿದೆ. ರಾಜ್ಯಮಟ್ಟದ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಶಿವಮೊಗ್ಗದಿಂದಲೇ ಆರಂಭವಾಗಲಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್‌ಎಂ ಮಂಜುನಾಥ್ ಗೌಡ ತಿಳಿಸಿದ್ದಾರೆ.
ಬರ-ಹಬ್ಬಗಳ ನಡುವೆ ಸಹಕಾರ ಸಪ್ತಾಹದ ಹಬ್ಬವನ್ನು ಅತ್ಯಂತ ಸಂಭ್ರಮ ಸಡಗರ ಹಾಗೂ ಸರಳತೆಯಿಂದ ಜಿಲ್ಲೆಯಲ್ಲಿ ಆಚರಿಸಲು ಸಿದ್ಧತೆ ನಡೆಸಲಾಗಿದೆ. ಆರು ದಿನಗಳ ಕಾಲ ಸಹಕಾರ ಸಂಘ-ಸಂಸ್ಥೆಗಳಲ್ಲಿ ಇತ್ತೀಚಿನ ಬೆಳವಣಿಗೆ, ಸಾಲೇತರ ಸಹಕಾರ ಸಂಘಗಳ ಪುನಶ್ಚೇತನ ಹಾಗೂ ಆರ್ಥಿಕ ಸೇರ್ಪಡೆ, ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣಗೊಳಿಸುವ ತಾಂತ್ರಿಕತೆಯ ಅಳವಡಿಕೆ ಮತ್ತು ಉನ್ನತೀಕರಣ, ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಮತ್ತು ಉದಯೋನ್ಮುಖ ವಲಯಗಳು, ಸಾರ್ವಜನಿಕ-ಖಾಸಗಿ-ಸಹಕಾರಿ ಸಹಭಾಗಿತ್ವ ಬಲಪಡಿಸುವುದು, ಮಹಿಳೆಯರು, ಯುವಜನ ಮತ್ತು ಅಬಲ ವರ್ಗಕ್ಕೆ ಸಹಕಾರ ಸಂಸ್ಥೆಗಳು, ಮತ್ತು ಸಹಕಾರ ಶಿಕ್ಷಣ, ತರಬೇತಿಯ ಪರಿಷ್ಕರಣೆ ವಿಷಯಗಳ ಕುರಿತು ವಿಚಾರಸಂಕಿರಣಗಳು ನಡೆಯಲಿವೆ ಎಂದರು.
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ರತ್ನಾಕರ್, ಉಪಾಧ್ಯಕ್ಷೆ ಮಮತಾ ಚಂದ್ರಕುಮಾರ್, ಶಿಮುಲ್ ಅಧ್ಯಕ್ಷ ಶ್ರೀಪಾದ ರಾವ್ ನಿಸ್ರಾಣಿ, ಸಹಕಾರಿ ಮುಖಂಡರಾದ ಹೆಚ್.ಎಲ್. ಷಡಾಕ್ಷರಿ, ಎಸ್.ಕೆ.ಮರಿಯಪ್ಪ, ಯೋಗೀಶ್, ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv