Breaking News

ದಿ ವೆಕೆಂಟ್ ಹೌಸ್…

Cnewstv / 15.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ದಿ ವೆಕೆಂಟ್ ಹೌಸ್ ಚಲನಚಿತ್ರ..

ಶಿವಮೊಗ್ಗ : ತೆರೆಗೆ ಬರಲು ರೆಡಿ ಎಸ್ತರ್ ನರೋನ್ಹಾ ಹೊಸ ಕನಸು.. ನ.17ಕ್ಕೆ ದಿ ವೆಕೆಂಟ್ ಹೌಸ್ ರಿಲೀಸ್ ಗ್ಲಾಮರ್ ಪಾತ್ರಗಳ ಮೂಲಕ ಫೇಮಸ್ ಆಗಿರುವ ಎಸ್ತರ್ ನರೋನ್ಹಾ ನಿರ್ದೇಶಕಿಯಾಗಿ ಬಡ್ತಿ ಪಡೆದಿರುವುದು ಗೊತ್ತೇ ಇದೆ. ‘ನಾವಿಕ’, ‘ಅತಿರಥ’, ‘ನುಗ್ಗೇಕಾಯಿ’, ‘ಲೋಕಲ್‌ಟ್ರೈನ್, ‘ಲಂಕೆ’ ಇನಾಮ್ಹಾರ್‌ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಈ ಬ್ಯೂಟಿ ‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ಡೈರೆಕ್ಟರ್ ಆಗಿ ಕ್ಯಾಪ್ ತೊಟ್ಟಿದ್ದಾರೆ. ನಿರ್ದೇಶನದ ಜೊತೆ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆ ಜವಾಬ್ದಾರಿಯನ್ನು ಕೂಡ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ನರೋನ್ಹಾ ಹೊಸ ಕನಸ್ಸಿಗೆ ಬೆಳ್ಳಿತೆರೆಗೆ ಬರಲು ಸಜ್ಜಾಗಿದೆ.

ದಿ ವೆಕೆಂಟ್ ಹೌಸ್ ಇದು ಹಾರರ್ ಸಿನಿಮಾವಲ್ಲ. ಇದೊಂದು ಖಾಲಿ ಮನೆ ಸುತ್ತಾ ಸಾಗುವ ಕಥೆ. ಈಗಿನ ಯೂತ್ ಗೆ ಬಹಳ ಕನೆಕ್ಟ್ ಆಗುವ ಸಿನಿಮಾವಿದು. ಪ್ರೀತಿ ಮತ್ತು ಎಮೋಷನ್ ಎರಡನ್ನು ಸೇರಿ ಎಣೆದಿರುವ ಕಥೆ. ಇದು ನೈಜ ಘಟನೆಯಾಧಾರಿತ ಚಿತ್ರವಲ್ಲ. ಸಿನಿಮಾ 1 ಗಂಟೆ 40ನಿಮಿಷವಿದೆ. ಸಿನಿಮಾದ ಸ್ಯಾಂಪಲ್ಸ್ ಈಗಾಗಲೇ ಭಾರಿ ಸದ್ದು ಮಾಡುತ್ತಿವೆ. ಹಾಡುಗಳು, ಟೀಸರ್ ಗಮನ ಸೆಳೆಯುತ್ತಿದೆ. ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಮೂಡಿಬಂದಿರುವ ಚಿತ್ರಕ್ಕೆ ನರೇಂದ್ರ ಗೌಡ ಛಾಯಾಗ್ರಹಣವಿದ್ದರೆ, ವಿಜಯ್ ರಾಜ್ ಸಂಕಲನವಿದೆ. ಬಹುತೇಕ ಮಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ.

 ನರೋನ್ಹಾ ಎಸ್ತರ್ ಮಂಗಳೂರಿನವರಾದರು ಆದರೆ ಬೆಳೆದಿದ್ದೆಲ್ಲ ಮುಂಬೈನಲ್ಲಿ, ಕನ್ನಡ ಸಿನಿಮಾ ‘ಉಸಿರಿಗಿಂತ ನೀನೇ ಹತ್ತಿರ’ ಎಂಬ ಸಿನಿಮಾ ಮೂಲಕ ಸ್ಯಾಂಡಲ್ವುಡೆ ಪ್ರವೇಶ ಮಾಡಿದ್ದಾರೆ. ಬಾಲಿವುಡ್ನ ಖ್ಯಾತ ನಟ ಅನುಪಮ್ ಖೇರ್ ನಟನಾ ಶಾಲೆಯಲ್ಲಿ ತರಬೇತಿ ಪಡೆದು ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಎಸ್ತರ್ ಬಳಿಕ ತೆಲುಗು, ತುಳು ಸಿನಿಮಾಗಳಲ್ಲೂ ನಟಿಸಿದ್ದಾರೆ. ಇಷ್ಟು ವರ್ಷದ ನಟನೆ ಅನುಭವವನ್ನು ಧಾರೆ ಎರೆದು ದಿ ವೆಕೆಂಟ್ ಹೌಸ್ ಸಿನಿಮಾ ನಿರ್ದೇಶಿಸಿ ನಟಿಸಿ ತಮ್ಮದೇ ಜಾನೆಟ್ ನೊರೊನ್ಹಾ ಪ್ರೊಡಕ್ಷನ್ಸ್ ನಿರ್ಮಾಣ ಕೂಡ ಮಾಡಿದ್ದಾರೆ. ಇದೇ ತಿಂಗಳ 17ರಂದು ರಾಜ್ಯಾದ್ಯಂತ ಸಿನಿಮಾ ತೆರೆಗೆ ಬರ್ತಿದೆ.

#EsterNoronha #ದಿವೆಕೆಂಟ್ ಹೌಸ್ #ಎಸ್ತರ್ ನರೋನ್ಹಾ #Thevacanthouse

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*