Cnewstv / 04.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ..
ಬೆಳಗಾವಿ : ಸಂಸತ್ತಿನ ಚಳಿಗಾಲದ ಅಧಿವೇಶನವು ಇಂದಿನಿಂದ ಡಿಸೆಂಬರ್ 22 ರವರೆಗೆ 19 ದಿನಗಳಲ್ಲಿ 15 ಸಭೆಗಳನ್ನು ನಡೆಸುತ್ತದೆ.
ಸಿದ್ದರಾಮಯ್ಯ ಸರ್ಕಾರದ ಆರು ತಿಂಗಳ ಪರೀಕ್ಷಾರ್ಥ ಅವಧಿ ಮುಕ್ತಾಯದ ಹೊತ್ತಿನಲ್ಲಿ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಇಂದಿನಿಂದ ಆರಂಭವಾಗುತ್ತಿದೆ.
ಪ್ರತಿಪಕ್ಷ ನಾಯಕನಾಗಿ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕಗೊಂಡ ಬಳಿಕ ಉಭಯ ನಾಯಕರಿಗೂ ಮೊದಲ ಅಧಿವೇಶನ.
ಬರಗಾಲ, ವರ್ಗಾವಣೆ ದಂಧೆ, ಗ್ಯಾರಂಟಿ ಹುಳುಕು, ವಿದ್ಯುತ್ ಬವಣೆ, ಪರೀಕ್ಷಾ ಅಕ್ರಮ, ಕಮಿಷನ್ ಕಿರುಕುಳ, ಡಿಸಿಎಂ ವಿರುದ್ಧ ಸಿಬಿಐ ತನಿಖೆ ವಾಪಸ್ ಪಡೆದ ನಿರ್ಣಯ ಹೀಗೆ ಹತ್ತು ಹಲವು ವಿಷಯಗಳನ್ನು ಶಾಸನ ಸಭೆಯಲ್ಲಿ ಪ್ರಸ್ತಾಪಿಸಿ ಸರ್ಕಾರದ ಕಿವಿಹಿಂಡಲು ಪ್ರತಿಪಕ್ಷ ಬಿಜೆಪಿ ತಯಾರಾಗಿದೆ. ಮೈತ್ರಿ ಪಕ್ಷ ಜೆಡಿಎಸ್ ಜತೆಗೂಡಿಯೇ ಸರ್ಕಾರದ ವಿರುದ್ಧ ತೊಡೆತಟ್ಟಲಿದೆ.
ಇದೇ ವೇಳೆ ಪ್ರತಿಪಕ್ಷಗಳ ಆರೋಪಗಳಿಗೆ ಆಗಿಂದಾಗಲೇ ಸ್ಪಷ್ಟನೆ ನೀಡುವ ಮೂಲಕ ವಿಷಯ ವಿಸ್ತಾರ ತಡೆಯುವ ತಂತ್ರಗಾರಿಕೆ ನಡೆಸಿದ ಸಿದ್ದರಾಮಯ್ಯ, ಅಧಿವೇಶನದಲ್ಲೂ ಎದುರಾಗಲಿರುವ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಲು ತಮ್ಮ ಬತ್ತಳಿಕೆಯಲ್ಲಿ ಸಾಕಷ್ಟು ಅಸ್ತ್ರ ಜೋಡಿಸಿಕೊಂಡಿದ್ದಾರೆ.
#ಚಳಿಗಾಲದಅಧಿವೇಶನ #ಬೆಳಗಾವಿ #WinterSession #Siddaramaiah #Bjp #congressgovernment #RAshok #BYvijindra
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ನೋಡಿ..
Recent Comments