Breaking News

ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಇನ್ನಿಲ್ಲ

Cnewstv / 04.12.2023/  ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಇನ್ನಿಲ್ಲ

ಮೈಸೂರು : ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ಲಕ್ಷಾಂತರ ಮಂದಿಯ ಮನೆಸೂರೆಗೊಂಡಿದ್ದ ಆನೆ ಅರ್ಜುನ ಅಸುನೀಗಿದ್ದಾನೆ.

ಹಾಸನ ಜಿಲ್ಲೆಯಲ್ಲಿ ಆನೆ ಸೆರೆ ಕಾರ್ಯಾಚರಣೆ ನಡೆಯುವಾಗ ಒಂಟಿ ಸಲಗದೊಂದಿಗೆ ನಡೆದ ಸಂಘರ್ಷದಲ್ಲಿ ತಿವಿತಕ್ಕೊಳಗಾಗಿ ಅರ್ಜುನ ಆನೆ ಮೃತಪಟ್ಟಿದೆ.

64 ವರ್ಷದ ಅರ್ಜುನ ಆನೆ ಮೈಸೂರು ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಬಳ್ಳೆ ಶಿಬಿರದಲ್ಲಿತ್ತು. ದಸರೆಯಿಂದ ನಾಲ್ಕು ವರ್ಷದ ಹಿಂದೆ ನಿವೃತ್ತಿ ನೀಡಲಾಗಿತ್ತು. ಅಂಬಾರಿ ಹೊರದೆ ಇದ್ದರೂ ದಸರೆಯಲ್ಲಿ ಭಾಗಿಯಾಗುತ್ತಿತ್ತು. ನಂತರ ಆನೆ, ಹುಲಿ ಸೆರೆ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಳ್ಳಲಾಗುತ್ತಿತ್ತು. ಈಗ ಆನೆ ಸೆರೆ ಕಾರ್ಯಾಚರಣೆ ವೇಳೆ ಹಾಸನ ಜಿಲ್ಲೆ ಎಸಳೂರು ಬಳಿ ಸೋಮವಾರ ಮಧ್ಯಾಹ್ನ ಮೃತಪಟ್ಟಿದೆ.

ಹತ್ತು ದಿನದಿಂದ ಹಾಸನ ಜಿಲ್ಲೆಯಲ್ಲಿ ಆನೆಗಳ ಸೆರೆ ಕಾರ್ಯಾಚರಣೆ ನಡೆಯುತ್ತಿದೆ. ಈವರೆಗೂ ಐದು ಆನೆಗಳನ್ನು ಸೆರೆ ಹಿಡಿಯಲಾಗಿದೆ. ಎಲ್ಲಾ ಕಾರ್ಯಾಚರಣೆಯಲ್ಲಿ ಅರ್ಜುನ ಆನೆ ಇತ್ತು. ಸೋಮವಾರ ಬೆಳಗ್ಗೆ ಸಕಲೇಶಪುರ ತಾಲ್ಲೂಕು ಎಸಳೂರಿನಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆ ಶುರುವಾಗಿದ್ದು, ಈ ವೇಳೆ ದುರಂತ ನಡೆದಿದೆ.

#ಮೈಸೂರುದಸರಾ #ಅರ್ಜುನ್ #ಆನೆ #ನಾಗರಹೊಳೆರಾಷ್ಟ್ರೀಯಉದ್ಯಾನ #Death

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*