Cnewstv / 11.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ದೀರರಾಜ್ ಸಾಹುರವರನ್ನು ಐಟಿ ಅಧಿಕಾರಿಗಳು ಬಂಧಿಸಬೇಕು, ಅವರ ಸಂಸದ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು.
ಶಿವಮೊಗ್ಗ : ಜಾರ್ಖಂಡ್‌ನಲ್ಲಿ ಕಾಂಗ್ರೆಸ್‌ನ ಭ್ರಷ್ಟ ಸಂಸದನ ಮನೆಯಲ್ಲಿ 300 ಕೋಟೆಗೂ ಹೆಚ್ಚಿನ ನಗದು ಪತ್ತೆಯಾದ ಹಿನ್ನಲೆಯಲ್ಲಿ ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಡಿ.ಸಿ. ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ದೀರರಾಜ್ ಸಾಹು ಅವರ ಮನೆಯಲ್ಲಿ ಕೋಟ್ಯಾಂತರ ನಗದು ಪತ್ತೆಯಾಗಿದ್ದು, ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ, ಲೂಟಿಕೋರ, ಲಂಚಕೋರ ಎಂಬುವುದು ಸಾಬೀತಾಗಿದೆ. ಬೆಂಗಳೂರಿನಲ್ಲಿ ೪೦ ಕೋಟಿ,೮೦ ಕೋಟಿ ಈಗ ೩೦೦ ಕೋಟಿಗೂ ಅಧಿಕ ಹಣ ಕಾಂಗ್ರೆಸ್ ಮುಖಂಡರ ಮನೆಯಲ್ಲಿ ಲಭ್ಯವಾಗಿದ್ದು, ಕಾಂಗ್ರೆಸ್‌ನ ಸಾಚತನ ಬಟಬಯಲಾಗಿದೆ. ಕೂಡಲೇ ಭ್ರಷ್ಟ ದೀರರಾಜ್ ಸಾಹುರವರು ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಅಲ್ಲಿಯವರೆಗೆ ತಕ್ಷಣ ಅವರನ್ನು ಐಟಿ ಅಧಿಕಾರಿಗಳು ಬಂಧಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಕಾಂಗ್ರೆಸ್‌ಗೆ ಇದೇನು ಹೊಸದಲ್ಲ, ಅಧಿಕಾರ ಬಂದಾಗಿನಿಂದ ಎಲ್ಲ ಗುತ್ತಿಗೆದಾರರನ್ನು ಹಿಂಡಿಹಿಪ್ಪೆ ಮಾಡಿ ಕೋಟ್ಯಾಂತರ ರೂ. ಕಮಿಷನ್ ಪಡೆದಿರುವುದು ಬಹಿರಂಗವಾಗಿದೆ. ನೈತಿಕತೆ ಇದ್ದರೆ ಕಾಂಗ್ರೆಸ್ ಪಕ್ಷ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದರು.
#BJP #Congress #DhirajPrasadSahu #Blackmoney #ITraid #Protest #Shivamogga
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments