Cnewstv / 13.12.2023/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರಿನ 12ಕ್ಕೂ ಹೆಚ್ಚು ಸ್ಥಳಗಳಲ್ಲಿ NIA ದಾಳಿ..
ಬೆಂಗಳೂರು : ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇತ್ತೀಚಿಗೆ ಬೆಂಗಳೂರಿನಲ್ಲಿ ಓರ್ವ ಶಂಕಿತ ಉಗ್ರನನ್ನು ಬಂಧಿಸಿದ್ದರು. ಇದಾದ ಬೆನ್ನಲ್ಲೇ ಇಂದು ಎನ್ಐಎ ಅಧಿಕಾರಿಗಳು ನಗರದ 12 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ. ಎನ್ಐಎ ಅಧಿಕಾರಿಗಳು ಡಿಸೆಂಬರ್ 9 ರಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್ನನ್ನು ಬಂಧಿಸಿದ್ದರು.
ಅಲಿ ಅಬ್ಬಾಸ್ ಮೂಲತಃ ಮುಂಬೈ ನಿವಾಸಿಯಾಗಿದ್ದು, ನಾಲ್ಕು ವರ್ಷದ ಹಿಂದೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದನು. ದಂಪತಿ ಹಾಗೂ ಮೂವರು ಮಕ್ಕಳು ಸಮೇತ ಬೆಂಗಳೂರಿನ ಪುಲಿಕೇಶಿನಗರದ ಮೋರ್ ರಸ್ತೆಯ ಬಿಲ್ಡಿಂಗ್ವೊಂದರ ಮೂರನೇ ಮಹಡಿಯಲ್ಲಿ ವಾಸವಾಗಿದ್ದನು. ಅಲಿ ಅಬ್ಬಾಸ್ ಡಾಟಾ ಕನ್ಸಲ್‌ಟೆಂಟ್ ಆಗಿ ಒಂದು ವರ್ಷದಿಂದ ಹಿಂದೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಕೊರೊನಾ ಸಂದರ್ಭದಲ್ಲಿ ಅಲಿ ಅಬ್ಬಾಸ್ ಕೆಲಸ ಬಿಟ್ಟಿದ್ದನು. ಪತ್ನಿ ನ್ಯೂಟ್ರಿ ಕೇರ್ ಆಸ್ಪತ್ರೆ ನಡೆಸುತ್ತಿದ್ದರು.
#NIA #Suspected Terrorists #Bengaluru
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ…
C News TV Kannada News Online in cnewstv