Cnewstv / 14.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಸಂಸತ್ ನಲ್ಲಿ ಭದ್ರತಾ ಲೋಪ, 8 ಸಿಬ್ಬಂದಿ ಅಮಾನತು.
ನವದೆಹಲಿ : ಸಂಸತ್ತಿನಲ್ಲಾದ ಭದ್ರತಾ ಲೋಪದ ಹಿನ್ನೆಲೆಯಲ್ಲಿ 8 ಸಿಬ್ಬಂದಿಯನ್ನು ಲೋಕಸಭೆಯ ಕಾರ್ಯದರ್ಶಿ ಅಮಾನತುಗೊಳಿಸಿದ್ದಾರೆ.
ಭದ್ರತಾ ಉಲ್ಲಂಘನೆಯ ಘಟನೆಯ ನಂತರ ಸಂಸತ್ ಭವನದ ಭದ್ರತೆಯನ್ನು ಹೆಚ್ಚಿಸಲಾಯಿತು. ಮಕರ ಗೇಟ್‌ನಿಂದ ಸಂಸದರಿಗೆ ಮಾತ್ರ ಸಂಸತ್ ಭವನ ಪ್ರವೇಶಿಸಲು ಅವಕಾಶ ನೀಡಲಾಗುತ್ತಿದ್ದು, ಕಟ್ಟಡಕ್ಕೆ ಪ್ರವೇಶಿಸುವ ಎಲ್ಲ ವ್ಯಕ್ತಿಗಳ ಶೂಗಳನ್ನು ತೆಗೆದು ಕೂಲಂಕುಷವಾಗಿ ತಪಾಸಣೆ ನಡೆಸಲಾಗುತ್ತಿದೆ.
ಸಂಸತ್ತಿನಲ್ಲಿ ನಡೆದ ದಾಳಿಯ ಬಗ್ಗೆ ಸದನದಲ್ಲಿ ಕಾಂಗ್ರೆಸ್ ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿರುದ್ಯೋಗವೇ ದಾಳಿಗೆ ಕಾರಣ ಎಂದು ಅಧೀರ್ ರಂಜನ್ ಹೇಳಿದ್ದಾರೆ. ಈ ಘಟನೆಯ ಬಗ್ಗೆ ಪ್ರಧಾನಿ ಮಾತನಾಡಬೇಕು, ಅವರು ಈ ವಿಷಯದಲ್ಲಿ ಮೌನ ವಹಿಸಿದ್ದಾರೆ. ಮೋದಿ ದೊಡ್ಡದಾಗಿ ಮಾತನಾಡುತ್ತಾರೆ. ಆದರೆ ಸದನಕ್ಕೆ ಭದ್ರತೆ ನೀಡಲು ಸಾಧ್ಯವಾಗುತ್ತಿಲ್ಲ. ಸಂಸತ್ತಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರಧಾನಿ ಭಾವಿಸಿದ್ದಾರೆ. ಸಂಸತ್ತಿನ ಭದ್ರತಾ ಲೋಪಗಳ ಬಗ್ಗೆ ಗಂಭೀರ ಚರ್ಚೆಯಾಗಬೇಕು. ದಾಳಿ ನಿಲ್ಲಿಸಿದ ಸಂಸದರನ್ನು ಮೆಚ್ಚಲೇಬೇಕು. ಸಂಸತ್ತಿನ ರಚನೆಯಲ್ಲಿ ತರಾತುರಿ ಇದ್ದುದರಿಂದಲೇ ಈ ರೀತಿಯ ಘಟನೆ ನಡೆದಿದೆ ಎಂದರು.
ಈ ವಿಚಾರವಾಗಿ ಇಂದು ಉಭಯ ಸದನಗಳಲ್ಲಿ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡುವಂತೆ ಪ್ರತಿಪಕ್ಷಗಳ ಸಂಸದರು ಒತ್ತಾಯಿಸುತ್ತಿದ್ದಾರೆ. ಲೋಕಸಭೆಯಲ್ಲಿ ಹೊಗೆ ಬಾಂಬ್‌ಗಳನ್ನು ಬಿಟ್ಟ ಆರು ಆರೋಪಿಗಳ ಪೈಕಿ ನಾಲ್ವರನ್ನು ಬಂಧಿಸಲಾಗಿದೆ, ಒಬ್ಬನನ್ನು ವಶದಲ್ಲಿರಿಸಲಾಗಿದ್ದು, ಆರನೇ ಆರೋಪಿಗಾಗಿ ಶೋಧ ಮುಂದುವರಿದಿದೆ. ಬಂಧಿತ ನಾಲ್ವರು ಆರೋಪಿಗಳಾದ ಅಮೋಲ್, ನೀಲಂ, ಸಾಗರ್ ಶರ್ಮಾ ಮತ್ತು ಮನೋರಂಜನ್ ಅವರನ್ನು ದೆಹಲಿ ಪೊಲೀಸರು ಇಂದು ಪಟಿಯಾಲ ಹೌಸ್ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. ಈ ಆರೋಪಿಗಳನ್ನು ಪೊಲೀಸರು ಕಸ್ಟಡಿಗೆ ಕೋರಲಿದ್ದಾರೆ.
#Assembly #Parliament #Parliament attack #arrest #Indianexpress
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments