Cnewstv / 16.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ
ಸಿ.ಎಸ್. ಷಡಾಕ್ಷರಿ ಅವರ ಸದಸ್ಯತ್ವ ಅಮಾನತ್ತು ???!!!
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ
ಸಿ.ಎಸ್. ಷಡಾಕ್ಷರಿ ಅವರ ಸದಸ್ಯತ್ವ ಅಮಾನತ್ತಿನಲ್ಲಿಡುವ ಬಗ್ಗೆ
ಬೈಲಾ ರೀತಿಯಲ್ಲಿ ಕ್ರಮ ಕೈಗೊಂಡು ವರದಿ ನೀಡಲು ಸಹಕಾರ
ಸಂಘಗಳ ಉಪನಿಬಂಧಕರ ಜಿಲ್ಲಾ ನೋಂದಣಾಧಿಕಾರಿಗಳು
ನೌಕರರ ಸಂಘದ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ರಾಜ್ಯ ಪರಿಷತ್ ಸದಸ್ಯ ಬಿ. ಗಂಗಾಧರ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ಉಪನಿಬಂಧಕರು ಈ ಕ್ರಮ ಕೈಗೊಂಡಿದ್ದಾರೆ.
ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಷಡಾಕ್ಷರಿ ಅವರನ್ನು
ಕೋಲಾರದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ
ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಮುಂದೆ ಕರ್ತವ್ಯಕ್ಕೆ
ಹಾಜರಾಗುವವರೆಗೆ ಅವರ ಸದಸ್ಯತ್ವವನ್ನು ಅಮಾನತ್ತಿನಲ್ಲಿಡಬೇಕು ಎಂದು ಬಿ. ಗಂಗಾಧರ ಮನವಿ ಮಾಡಿದ್ದರು.
#C S Shadakshari. #Govt. Employees’ Association president #suspended.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments