Cnewstv / 28.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಚರಿಸುತ್ತಿದ್ದ ಕಾರು ಅಪಘಾತ,
ಬೆಂಗಳೂರು : ಶಿಕ್ಷಣ ಸಚಿವ, ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಂಚಾರಿಸುತ್ತಿದ್ದ ಕಾರಿಗೆ ಅಪಘಾತವಾಗಿದ್ದು, ಸಚಿವರು ಅಪಾಯದಿಂದ ಪಾರಾಗಿದ್ದಾರೆ.
ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುತ್ತಿರುವಾಗ, ತಡ ರಾತ್ರಿ ತುಮಕೂರು ಸಮೀಪದ ನಂದಿಹಳ್ಳದಲ್ಲಿ ಅಪಘಾತವಾಗಿದೆ.
ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಬೆಂಗಳೂರಿಗೆ ಹೋಗುವಾಗ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧು ಬಂಗಾರಪ್ಪನವರ ಕಾರು ಅಪಘಾತವಾಗಿದೆ.
ಸಚಿವ ಮಧುಬಂಗಾರಪ್ಪ ಸಂಚರಿಸುತ್ತಿದ್ದ ಕಾರು ನಂದಿಹಳ್ಳ ಎಂಬಲ್ಲಿ ಟಿಪ್ಪರ್ ಲಾರಿಗೆ ಗುದ್ದಿದೆ ಪರಿಣಾಮವಾಗಿ ಕಾರಿನ ಮುಂಭಾಗ ನುಚ್ಚು ಗುಜ್ಜಾಗಿದೆ. ಕೂದಲ ಎಲೆಯ ಅಂತರಾದಲ್ಲಿ ಭಾರಿ ಅನಾಹುತ ತಪ್ಪಿದೆ. ಕಾರಿನಲ್ಲಿ ಮಧು ಬಂಗಾರಪ್ಪ ಸೇರಿದಂತೆ ಮೂವರು ಸಂಚರಿಸುತ್ತಿದ್ದು ಯಾವುದೇ ಅಪಾಯವಾಗಿಲ್ಲ ನಂತರ ಬೇರೊಂದು ವಾಹನದ ವ್ಯವಸ್ಥೆ ಮಾಡಿಕೊಂಡು ಸಚಿವರು ಬೆಂಗಳೂರಿಗೆ ತೆರಳಿದ್ದಾರೆ.
#Madhubangarappa #caraccident #bangaloretoshivamogga #Roadaccident
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ..
Recent Comments