Breaking News

29 ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ.

Cnewstv / 28.12.2023/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

29 ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ.

ಬೆಂಗಳೂರು : ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ ಕಡೆಗಣನೆ ವಿರುದ್ಧ ಸಿಡಿದೆದ್ದ ಕರವೇ ಸಂಘಟನೆ ಇಂಗ್ಲಿಷ್ ಬೋರ್ಡ್ ಹರಿದು ಆಕ್ರೋಶ ಹೊರಹಾಕಿತ್ತು. ಪ್ರತಿಭಟನೆ ಅತಿರೇಕಕ್ಕೆ ತಿರುಗಿ ಕಲ್ಲು ತೂರಟ ಕೂಡ ನಡೆದಿತ್ತು. ಕಾನೂನು ಕೈ ಗೆ ತೆದುಕೊಂಡ ಕರವೇ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಸದ್ಯ ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿ 29 ಕರವೇ ಕಾರ್ಯಕರ್ತರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ ಮಾಡಲಾಗುತ್ತಿದೆ.

ಫಲಕದಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಆಗ್ರಹಿಸಿ ಕರವೇ ನಡೆಸಿದ ಪ್ರತಿಭಟನೆ ವೇಳೆ ನಾರಾಯಣಗೌಡ ಸೇರಿ 29 ಕರವೇ ಕಾರ್ಯಕರ್ತರನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಒಪ್ಪಿಸಿದ್ದು ಬೆಂಗಳೂರು ಗ್ರಾ. ಜಿಲ್ಲೆಯ ದೇವನಹಳ್ಳಿ JMFC ಕೋರ್ಟ್ ಜಡ್ಜ್ ಕರವೇ ಕಾರ್ಯಕರ್ತರಿಗೆ ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ. ಸದ್ಯ ನ್ಯಾಯಾಂಗ ಬಂಧನ ಹಿನ್ನೆಲೆ ಬಂಧಿತ ಕರವೇ ಕಾರ್ಯಕರ್ತರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ ಮಾಡಲಾಗುತ್ತಿದೆ.

#KarnatakaRakshanaVedike #ParappanaAgraharaCentralJail #Jmfc

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*