Cnewstv / 02.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ನ್ಯಾಷನಲ್ ಸಂಸ್ಥೆ ಮೇಲೆ ಇಡಿ ದಾಳಿ…
ಶಿವಮೊಗ್ಗ : ತೀರ್ಥಹಳ್ಳಿಯ ಸುಲೈಮಾನ್ ಎಂಬುವರಿಗೆ ಸೇರಿದ ನ್ಯಾಷನಲ್ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಳ್ಳಂಬೆಳಗ್ಗೆ 10 ವಾಹನಗಳಲ್ಲಿ ಇಡಿ ಅಧಿಕಾರಿಗಳು ಆಗಮಿಸಿದ್ದಾರೆ. ಇನ್ನೂ ಅಂಗಡಿ ಹಾಗೂ ಕಚೇರಿಯ ಬಾಗಿಲು ತೆರೆಯದ ಕಾರಣ ಇಡಿ ಅಧಿಕಾರಿಗಳು ಹೊರಗಡೆ ಕಾಯುತ್ತಿದ್ದಾರೆ.
ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್, ಇಂಡಿಯನ್ ಗ್ಯಾಸ್ ಗೋಡೌನ್ ಹಾಗೂ ಸುಲೈಮಾನ್ ಅವರ ಮನೆ ಮೇಲೂ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ತಾಲೂಕಿನ ಹಾಗೂ ರಾಜ್ಯದ ಹಲವೆಡೆ ರಸ್ತೆಯ ಕಾಮಗಾರಿಗಳನ್ನು ಈ ಸಂಸ್ಥೆಯೇ ನಡೆಸುತ್ತಿದೆ. ಆದರೆ ಸಂಸ್ಥೆಯ ಹಣದ ವಿಚಾರದಲ್ಲಿ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನೆಡೆಸಿರುವ ಶಂಕೆ ವ್ಯಕ್ತವಾಗಿದೆ.
ಶಿವಮೊಗ್ಗ ಏರ್ಪೋರ್ಟ್ ಸೇರಿದಂತೆ ಶಿವಮೊಗ್ಗ ಜಿಲ್ಲೆ ಸೇರಿದಂತೆ ವಿವಿಧೆಡೆ ಸಾವಿರಾರು ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ಮಾಡಿದ್ದಾರೆ. ಅದರಲ್ಲೂ ಹೈವೇ ಮತ್ತು ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯನ್ನೂ ಈ ಕಂಪನಿಯೇ ನಡೆಸುತ್ತಿದೆ.
#Thirthahalli #ED #National #Shivamoggaairport #Bangalore.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ..