Cnewstv / 06.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
1992ರಲ್ಲಿ ನಡೆದ ಗಲಭೆ ಪ್ರಕರಣ, ಶ್ರೀಕಾಂತ್ ಪೂಜಾರಿ ಜೈಲಿನಿಂದ ಬಿಡುಗಡೆ..
ಹುಬ್ಬಳ್ಳಿ : 1992ರಲ್ಲಿ ನಡೆದ ಗಲಭೆ ಪ್ರಕರಣವೊಂದರಲ್ಲಿ ಬಂಧಿಸಲ್ಪಟ್ಟಿದ್ದ ಆರೋಪಿ ಶ್ರೀಕಾಂತ್ ಪೂಜಾರಿ ಷರತ್ತು ಬದ್ಧ ಜಾಮೀನಿನ ಮೇಲೆ ಇಂದು ಹುಬ್ಬಳ್ಳಿ ಉಪ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆ ಶ್ರೀಕಾಂತ್ ಪೂಜಾರಿ ಅವರಿಗೆ ಸಿಹಿ ತಿನ್ನಿಸಿ, ಹೂವಿನ ಹಾರ ಹಾಕಿ ಬಿಜೆಪಿ ಕಾರ್ಯಕರ್ತರು ಸ್ವಾತಿಸಿದರು.
ಜಾಮೀನು ಮಂಜೂರಾದ ಹಿನ್ನೆಲೆ ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಅವರನ್ನು ಇಂದು ಹುಬ್ಬಳ್ಳಿ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ರಾಮಜನ್ಮಭೂಮಿ ಹೋರಾಟ ಸಂಬಂಧ ಹುಬ್ಬಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಭಾಗಿಯಾಗಿದ್ದ ಪ್ರಕರಣ ಸಂಬಂಧ ಕರಸೇವಕ ಶ್ರೀಕಾಂತ ಪೂಜಾರಿಗೆ ನಿನ್ನೆ ಹುಬ್ಬಳ್ಳಿಯ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಇಬ್ಬರ ಶ್ಯೂರಿಟಿ, ಒಂದು ಲಕ್ಷ ರೂಪಾಯಿ ಮೌಲ್ಯದ 2 ಬಾಂಡ್, ಕೋರ್ಟ್ ವ್ಯಾಪ್ತಿ ಬಿಟ್ಟುಹೋಗಬಾರದು, ವಿಚಾರಣೆಗೆ ಹಾಜರಾಗಬೇಕು, ಸಾಕ್ಷ್ಯ ನಾಶ ಮಾಡಬಾರದು ಎಂದು ಷರತ್ತು ವಿಧಿಸಿ 1 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನಿನ್ನೆ ತೀರ್ಪು ಪ್ರಕಟಿಸಿತ್ತು.
ರಾಮಮಂದಿರ ಹೋರಾಟ ಸಂಬಂಧ 1992 ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಾಟೆಯಲ್ಲಿ ಶ್ರೀಕಾಂತ್ ಪೂಜಾರಿ ಭಾಗಿಯಾಗಿದ್ದರು. ಆದರೆ ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಶ್ರೀರಾಮಲಲ್ಲಾನ ಮೂರ್ತಿ ಪ್ರತಿಷ್ಠಾಪನೆಯ ದಿನ ಸಮೀಪ ಬರುತ್ತಿದ್ದಂತೆ ಶ್ರೀಕಾಂತ್ ಪೂಜಾರಿಯನ್ನು ಹುಬ್ಬಳ್ಳಿಯ ಶಹರ ಠಾಣಾ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಇದು ದೇಶದಾದ್ಯಂತ ಸದ್ದು ಮಾಡಿದ್ದು, ರಾಜ್ಯ ವಿಪಕ್ಷ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು.
#ShrikanthPoojari #Rammandira #Hubli
ಇದನ್ನು ಒದಿ..
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv