Cnewstv / 10.01.2024 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಒಂದೇ ದಿನ ದಾಖಲೆ ಆದಾಯಗಳಿಸಿದ ಮೆಟ್ರೋ…
ಬೆಂಗಳೂರು : ಒಂದೇ ದಿನ ನಮ್ಮ ಮೆಟ್ರೋ ದಾಖಲೆ ಆದಾಯಗಳಿಸಿದೆ.
ಹೊಸ ವರ್ಷದ ಹಿನ್ನೆಲೆ ಡಿ.31ರಂದು ಒಂದೇ ದಿನದಲ್ಲಿ ಬಿಎಂಆರ್ಸಿಎಲ್ಗೆ ಬರೋಬ್ಬರಿ 1 ಕೋಟಿ 64 ಲಕ್ಷದ 74 ಸಾವಿರದ 918 ರೂಪಾಯಿ ಆದಾಯ ಹರಿದು ಬಂದಿತ್ತು. ಇದೀಗ ನಮ್ಮ ಮೆಟ್ರೋ ಇಡೀ ಡಿಸೆಂಬರ್ ತಿಂಗಳ ಆದಾಯದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಡಿಸೆಂಬರ್ನಲ್ಲಿ ನಮ್ಮ ಮೆಟ್ರೋಗೆ ದಾಖಲೆ ಪ್ರಮಾಣದಲ್ಲಿ ಆದಾಯ ಹರಿದುಬಂದಿದೆ. ಡಿಸೆಂಬರ್ ತಿಂಗಳಲ್ಲಿ ಬರೋಬ್ಬರಿ 2 ಕೋಟಿ ಜನರು ಮೆಟ್ರೋ ಬಳಕೆ ಮಾಡಿದ್ದು ₹55 ಕೋಟಿ ಆದಾಯ ಸಂಗ್ರಹವಾಗಿದೆ.
ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ. ನಮ್ಮ ಮೆಟ್ರೋ ಮೊದಲ ಬಾರಿಗೆ ಒಂದೇ ತಿಂಗಳಲ್ಲಿ ಅತ್ಯಧಿಕ ಪ್ರಯಾಣಿಕರಿಗೆ ಸೇವೆ ನೀಡುವ ಮೂಲಕ ದಾಖಲೆ ಬರೆದಿದೆ. ಡಿಸೆಂಬರ್ ಒಂದೇ ತಿಂಗಳಲ್ಲಿ ಬರೋಬ್ಬರಿ 2 ಕೋಟಿ ಜನರು ಮೆಟ್ರೋ ಬಳಕೆ ಮಾಡಿದ್ದಾರೆ. ದಿನಕ್ಕೆ ಸರಾಸರಿ 6.88 ಲಕ್ಷ ಜನರು ಸಂಚಾರ ಮಾಡಿದ್ದಾರೆ. ವರ್ಷದ ಕೊನೆ ತಿಂಗಳಾದ ಡಿಸೆಂಬರ್ನಲ್ಲಿ ಬರೋಬ್ಬರಿ ₹55 ಕೋಟಿ ಆದಾಯ ಹರಿದು ಬಂದಿದೆ. ಡಿಸೆಂಬರ್ ನ ಒಟ್ಟು ಪ್ರಯಾಣಿಕರ ಸಂಖ್ಯೆ 2,13,34,076. ದಿನದ ಸರಾಸರಿ ಪ್ರಯಾಣಿಕರ ಸಂಖ್ಯೆ 6,88,196.
#BMRCL #NammaMetro #Metro #Newyear2024
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ..
C News TV Kannada News Online in cnewstv